I WILL CONTEST FROM CHIKKABALLAPUR: ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ನಾನು ಟಿಕೆಟ್ ಆಕಾಂಕ್ಷಿ: ಪುತ್ರನಿಗೆ ಟಿಕೆಟ್ ಇಲ್ಲವಾದರೆ ನನಗೆ ನೀಡಲಿ : ಬಿಜೆಪಿ ಶಾಸಕ ಎಸ್ ಆರ್ ವಿಶ್ವನಾಥ್

ಬೆಂಗಳೂರು : ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ನಾನು ಕೂಡ ಟಿಕೆಟ್ ಆಕಾಂಕ್ಷಿಯಾಗಿದ್ದು, ಮೊದಲ ಆದ್ಯತೆ ನನ್ನ ಪುತ್ರನಿಗೆ ಕೊಡಲಿ ಇಲ್ಲವಾದರೆ ನನಗೆ ನೀಡಲಿ ಎಂದು ಬಿಜೆಪಿ ಶಾಸಕ ಎಸ್ ಆರ್ ವಿಶ್ವನಾಥ್ ಸ್ಪಷ್ಟಪಡಿಸಿದ್ದಾರೆ.

ನವದೆಹಲಿಯಿಂದ ಬೆಂಗಳೂರಿಗೆ ಹಿಂದಿರುಗಿದ ನಂತರ ಕೆಂಪೇಗೌಡ ಏರ್ಪೋರ್ಟ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಸ್ ಆರ್ ವಿಶ್ವನಾಥ್, ನಾನು ಕೂಡ ಅಭ್ಯರ್ಥಿಯ ರೇಸ್ ನಲ್ಲಿ ಇದ್ದೇನೆ, ಪಕ್ಷದ ವರಿಷ್ಠರು ನನ್ನ ಮನವಿಯನ್ನ ಅಂಗೀಕರಿಸಬೇಕು ಎಂದು ಆಗ್ರಹಿಸಿದರು.
ನಮ್ಮ ಪಕ್ಷದ ಕೆಲವರು ನನಗೆ ಅಡ್ಡಿಪಡಿಸುತ್ತಿದ್ದಾರೆ, ನಾನು ಕಳೆದ 25- 30 ವರ್ಷಗಳಿಂದ ರಾಜಕಾರಣ ಮಾಡಿಕೊಂಡು ಬಂದಿದ್ದೇನೆ, ಈಗಾಗಲೇ ನಾನು ಕೂಡ ಟಿಕೆಟ್ ಆಕಾಂಕ್ಷಿ ಎಂದು ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ಬಿಎಸ್ ಯಡಿಯೂರಪ್ಪಗೆ ತಿಳಿಸಿದ್ದೇನೆ ಎಂದು ಎಸ್ ಆರ್ ವಿಶ್ವನಾಥ್ ಸ್ಪಷ್ಟಪಡಿಸಿದರು.

More News