DV SADANANDA GOWDA: ನೋವಾಗಿದ್ದು ನಿಜ, ಕಾಂಗ್ರೆಸ್ ಗೆ ಸೇರಲ್ಲ, ಪಕ್ಷ ಶುದ್ದೀಕರಣದತ್ತ ನನ್ನ ನಡೆ! ಡಿವಿ ಸದಾನಂದ ಗೌಡ

ಬೆಂಗಳೂರು: ಕಾಂಗ್ರೆಸ್ ನಿಂದ ನನಗೆ ಆಹ್ವಾನ ಬಂದಿದ್ದು ನಿಜ. ನಾವು ನಿಮಗೆ ಟಿಕೆಟ್ ಕೊಡುತ್ತೇವೆ. ನಿಮ್ಮನ್ನು ಗೆಲ್ಲಿಸಿಕೊಂಡು ಬರುತ್ತೇವೆ ಎಂದು ಕಾಂಗ್ರೆಸ್ ನಿಂದ ಆಹ್ವಾನ ಬಂದಿತ್ತು. ಆದರೆ ನಾನು, ಕಾಂಗ್ರೆಸ್ ಗೆ ಸೇರಲ್ಲ ಎಂದು ಮಾಜಿ ಸಿಎಂ ಡಿವಿ ಸದಾನಂದ ಗೌಡ ಸ್ಪಷ್ಟಪಡಿಸಿದರು.

ಆದರೆ ನಾನು ಪಕ್ಷ ಶುದ್ದೀಕರಣ ಮಾಡುವತ್ತ ಗಮನ ಹರಿಸುತ್ತೇನೆ ಎಂದು ಹೇಳಿದರು. ಟಿಕೆಟ್ ಕೈತಪ್ಪಿದ್ದರಿಂದ ನೋವಾಗಿದ್ದು ನಿಜ. ಆದರೆ ನನ್ನ ಈ ಸ್ಥಿತಿಗೆ ಕಾರಣರಾದವರು ಪಶ್ಚಾತ್ತಾಪ ಅನುಭವಿಸುತ್ತಾರೆ ಎಂದರು.

More News

You cannot copy content of this page