HUBBALLI: ಪೌರಕಾರ್ಮಿಕರಿಗೆ ಸನ್ಮಾನ: ನಗರ ಸ್ವಚ್ಛ ಮಾಡುವವರಿಗೆ ನಮನ

ಹುಬ್ಬಳ್ಳಿ: ಹುಬ್ಬಳ್ಳಿಯ ಎಚ್‌ಸಿಜಿ ಎನ್‌ಎಂಆರ್‌ ಕ್ಯಾನ್ಸರ್‌ ಸೆಂಟರ್‌ ವತಿಯಿಂದ ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯಲ್ಲಿ ವೃತ್ತಿಯಲ್ಲಿರುವ 10 ಮಹಿಳಾ ಪೌರಕಾರ್ಮಿಕರ ಗಮನಾರ್ಹ ಕೊಡುಗೆಯನ್ನು ಸ್ಮರಿಸಿ ಶಾಸಕರಾದ ಶ್ರೀ ಪ್ರಸಾದ್ ಅಬ್ಬಯ್ಯ ಅವರು ಸನ್ಮಾನಿಸಿದರು.
ಹುಬ್ಬಳ್ಳಿಯ ಎಚ್‌ಸಿಜಿ ಎನ್‌ಎಂಆರ್ ಕ್ಯಾನ್ಸರ್ ಸೆಂಟರ್ ಆವರಣದಲ್ಲಿ ಸನ್ಮಾನ ಕಾರ್ಯಕ್ರಮವನ್ನು ನಡೆಸಲಾಯಿತು. ಸಮುದಾಯದ ಸುಧಾರಣೆಗೆ ಈ ಮಹಿಳೆಯರ ಅಮೂಲ್ಯ ಕೊಡುಗೆಗಳನ್ನು ಗುರುತಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿತ್ತು. ಈ ವೇಳೆ ಯುವ ಮುಖಂಡ ಶ್ರೀ ರಜತ್ ಉಳ್ಳಾಗಡ್ಡಿಮಠ್, ಹೆಲ್ತ್‌ಕೇರ್ ಗ್ಲೋಬಲ್ ಎಂಟರ್ಪ್ರೈಸಸ್ ಲಿಮಿಟೆಡ್‌ನ ಕರ್ನಾಟಕ ಪ್ರಾದೇಶಿಕ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮನೀಷಾ ಕುಮಾರ್, ಹುಬ್ಬಳ್ಳಿಯ ಎಚ್‌ಸಿಜಿ ಎನ್‌ಎಂಆರ್ ಕ್ಯಾನ್ಸರ್ ಸೆಂಟರ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಅಬ್ದುಲ್ ರಹೀಂ ಉಪಸ್ಥಿತರಿದ್ದರು.

More News

You cannot copy content of this page