Maritibbe Gowda Resigns: ವಿಧಾನ ಪರಿಷತ್ ಸದಸ್ಯತ್ವಕ್ಕೆ ಮರಿತಿಬ್ಬೇಗೌಡ ರಾಜೀನಾಮೆ: ಸಭಾಪತಿ ಹೊರಟ್ಟಿ ನಿವಾಸದಲ್ಲಿ ಸಲ್ಲಿಕೆ

ಹುಬ್ಬಳ್ಳಿ: ವಿಧಾನ ಪರಿಷತ್ ಸದಸ್ಯತ್ವಕ್ಕೆ ಮರಿತಿಬ್ಬೇಗೌಡ ರಾಜೀನಾಮೆ ನೀಡಿದ್ದು, ಲೋಕಸಭಾ ಚುನಾವಣೆಗೂ ಮುನ್ನ ವಿಧಾನಪರಿಷತ್ ಜೆಡಿಎಸ್ ಸದಸ್ಯ ಮರಿತಿಬ್ಬೇಗೌಡ ತಮ್ಮ ಸದಸ್ಯತ್ವಕ್ಕೆ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದರು.

ಹೌದು..ಮಧ್ಯಾಹ್ನ 12 ಗಂಟೆ ಸುಮಾರಿಗೆ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹುಬ್ಬಳ್ಳಿಯ ಗೃಹ ಕಚೇರಿಗೆ ಆಗಮಿಸಿ ರಾಜೀನಾಮೆ ಪತ್ರ ಸಲ್ಲಿಸಿರುವ ಮರಿತಿಬ್ಬೇಗೌಡ, ಲಿಖಿತ ಮೂಲಕ ತಮ್ಮ ರಾಜೀನಾಮೆ ನೀಡಿದರು.

ಇನ್ನೂ ರಾಜೀನಾಮೆ ಸ್ವೀಕರಿಸಿದ ಸಭಾಪತಿ ಬಸವರಾಜ ಹೊರಟ್ಟಿಯವರು, ಮರಿತಿಬ್ಬೇಗೌಡ ಸ್ವ ಹಿತಾಸಕ್ತಿಯಿಂದ ರಾಜೀನಾಮೆ ನೀಡಿದ್ದು, ರಾಜೀನಾಮೆ ಅಂಗೀಕರಿಸಲಾಗಿದೆ. ಇನ್ನೂ ಮುಂದಿನ ಕ್ರಮಗಳನ್ನು ಜಾರಿಗೊಳಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.

More News

You cannot copy content of this page