Karnataka High Court Justice: ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾಗಿ ನ್ಯಾಯಮೂರ್ತಿ ಶ್ರೀಮತಿ ಅನು ಸಿವರಾಮನ್ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು: ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾಗಿ ಗೌರವಾನ್ವಿತ ನ್ಯಾಯಮೂರ್ತಿ ಶ್ರೀಮತಿ ಅನು ಸಿವರಾಮನ್ ಅವರು ಇಂದು ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರಿಂದ ಪ್ರಮಾಣ ವಚನ ಸ್ವೀಕರಿಸಿದರು.

ಇಂದು ರಾಜಭವನದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾದ ಸರಳ ಸಮಾರಂಭದಲ್ಲಿ ಗೌರವಾನ್ವಿತ ರಾಜ್ಯಪಾಲರು ನ್ಯಾಯಮೂರ್ತಿಗಳಿಗೆ ಪ್ರಮಾಣವಚನ ಬೋಧಿಸಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಇಲಾಖೆಯ ಸಚಿವರಾದ ಹೆಚ್.ಕೆ.ಪಾಟೀಲ್, ಕರ್ನಾಟಕದ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾದ ನಿಲಯ್ ವಿಪಿನ್‍ಚಂದ್ರ ಅಂಜಾರಿಯಾ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ರಜನೀಶ್ ಗೋಯೆಲ್, ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳು, ಗಣ್ಯರು ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

More News

You cannot copy content of this page