FORMER MLC MARITIBBE GOWDA JOING CONGRESS: ಮಂಡ್ಯದಲ್ಲಿ ಆಪರೇಷನ್ ಹಸ್ತ: ಜೆಡಿಎಸ್ ತೊರೆದು ಕಾಂಗ್ರೆಸ್ ಸೇರುತ್ತಿರುವ ಜೆಡಿಎಸ್ ಮುಖಂಡರು

ಬೆಂಗಳೂರು : ಮಂಡ್ಯದಲ್ಲಿ ರಾಜಕೀಯ ಚಟುವಟಿಕೆಗಳು ಭಾರೀ ಗರಿಗೆದರಿವೆ. ಒಂದೆಡೆ ಹಾಲಿ ಸಂಸದೆ ಸುಮಲತಾ ಅಂಬರೀಷ್ ಬಿಜೆಪಿ ಟಿಕೆಟ್ ಗಾಗಿ ಲಾಭಿ ನಡೆಸುತ್ತಿದ್ದಾರೆ. ಮತ್ತೊಂದೆಡೆ ಮೈತ್ರಿ ಪರವಾಗಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅಥವಾ ಅವರ ಪುತ್ರ ಇಬ್ಬರಲ್ಲಿ ಒಬ್ಬರು ಸ್ಪಧೆಗೆ ಸಜ್ಜಾಗುತ್ತಿದ್ದಾರೆ.
ಇದರ ನಡುವೆ, ಮಂಡ್ಯದ ಅನೇಕ ಜೆಡಿಎಸ್ ಮುಖಂಡರು ಕಾಂಗ್ರೆಸ್ ಕಡೆ ಮುಖಮಾಡಿದ್ದು, ಇಂದು ಅನೇಕರು ಪಕ್ಷ ಸೇರ್ಪಡೆಯಾಗಲಿದ್ದಾರೆ.
ನಿನ್ನೆ ತಾನೆ ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ ಜೆಡಿಎಸ್ ಮುಖಂಡ ಮರಿ ತಿಬ್ಬೇಗೌಡ, ಮಾಜಿ ಶಾಸಕ ಎಂ.ಶ್ರೀನಿವಾಸ್, ವಿಧಾನ ಪರಿಷತ್ ಮಾಜಿ ಶಾಸಕ ಅಪ್ಪಾಜಿಗೌಡ ಇದೀಗ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ.
ಲೋಕಸಭಾ ಚುನಾವಣಾ ಸನಿಹದಲ್ಲಿ ಮಂಡ್ಯದಲ್ಲಿ ಭಾರೀ ಕಾರ್ಯಾಚರಣೆ ನಡೆಸಿರುವ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಇಂದು ಅವರನ್ನು ಕೆಪಿಸಿಸಿ ಕಚೇರಿಯಲ್ಲಿ ಪಕ್ಷ ಸೇರ್ಪಡೆ ಮಾಡಿಕೊಳ್ಳಲಿದ್ದಾರೆ.

More News