ಹುಬ್ಬಳ್ಳಿ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕೇಂದ್ರದ ಅನುದಾನಕ್ಕಾಗಿ ಸುಪ್ರೀಂಕೋರ್ಟ್ ಮೊರೆ ಹೋಗಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅಭಿಪ್ರಾಯಪಟ್ಟಿದ್ದಾರೆ.
ಹುಬ್ಬಳ್ಳಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ಸುಪ್ರೀಂ ಕೋರ್ಟ್ ಮೊರೆ ರಾಜಕೀಯ ಸ್ಟಂಟ್ರ್ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಚುನಾವಣೆ ಸಮಯದಲ್ಲಿ ಜನರ ಗಮನವನ್ನು ಬೇರೆ ಕಡೆ ಸೆಳೆಯಲು ನಡೆಸುತ್ತಿರುವ ತಂತ್ರಗಾರಿಕೆ ಎಂದರು. ಅನುದಾನ ಬಂದಿಲ್ಲ ಎಂದು ಸುಪ್ರೀಂ ಕೋರ್ಟ್‌ಗೆ ಹೋಗಿದ್ದು ಇತಿಹಾಸದಲ್ಲಿಯೇ ಮೊದಲು, ಅನುದಾನದ ಕುರಿತು ಚರ್ಚಿಸಲು ಬೇರೆ ಬೇರೆ ವೇದಿಕೆಗಳಿವೆ ಅದನ್ನು ಬಳಸುವುದನ್ನು ಬಿಟ್ಟು ಈ ರೀತಿ ಸರಿಯಾದುದ್ದಲ್ಲ ಎಂದರು.
ಲೋಕಸಭಾ ಮತ್ತು ರಾಜ್ಯಸಭೆಯಲ್ಲಿ ಚರ್ಚಿಸಬಹುದು. ರಾಜ್ಯ ಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆಯವರೇ ವಿರೋಧ ಪಕ್ಷದ ನಾಯಕರು. ಆದ್ರೆ ಅಲ್ಲಿ ಚರ್ಚಸುತ್ತಿಲ್ಲ, ಚುನಾವಣೆ ಪೂರ್ವದಲ್ಲಿ ದೆಹಲಿಗೆ ಹೋಗಿ ಹೋರಾಟ ಮಾಡುವ ಸ್ಟಂಟ್ ಮಾಡಿದ್ದರು. ಈಗ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. ಇದೆಲ್ಲವೂ ಚುನಾವಣೆ ಪ್ರಚಾರದ ಗಿಮಿಕ್. ಎಂದರು.

ಬೆಳಗಾವಿಯಲ್ಲೇ ನನಗೆ ಟಿಕೇಟ್ ಸಿಗಲಿದೆ
ಕಾಂಗ್ರೆಸ್ ನಿಂದ ಬಿಜೆಪಿಗೆ ತೆರಳಿದ ಶೆಟ್ಟರ್, ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಹೈಕಮಾಂಡ್ ಇನ್ನು ಟಿಕೇಟ್ ನೀಡಿಲ್ಲ. ಸ್ಥಳೀಯವಾಗಿ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಹೈಕಮಾಂಡ್ ಮೀನಾ ಮೇಷ ಎಣಿಸುತ್ತಿದೆ. ಇದರ ನಡುವೆಯೂ ಬೆಳಗಾವಿ ಕ್ಷೇತ್ರದಲ್ಲಿ ಟಿಕೆಟ್ ಹಂಚಿಕೆಯಲ್ಲಿ ಯಾವ ಕಂಗಟ್ಟುಗಳಿಲ್ಲ, ಇಂದು ಇಲ್ಲಾ ನಾಳೆ ಟಿಕೆಟ್ ಘೋಷಣೆಯಾಗಲಿದೆ ಎಂದರು.
ನನಗೆ ಟಿಕೆಟ್ ಸಿಗುತ್ತದೆ ಎಂಬ ವಿಶ್ವಾಸದಲ್ಲಿ ನಾನಿದ್ದೇನೆ. ತಮಗೆ ಸಿಗುತ್ತೆ ಎಂಬ ಧೃಢವಾಗಿ ಅವರು ಹೇಳಿತ್ತಿಲ್ಲ, ಕ್ಷೇತ್ರದ ಹಲವು ನಾಯಕರು ನನಗೆ ಈಗಾಗಲೇ ಆಹ್ವಾನ ನೀಡುತ್ತಿದ್ದಾರೆ. ನಾನು ಸಹ ಅವರ ಜೊತೆಗೆ ನಾನು ಸಂಪರ್ಕದಲ್ಲಿದ್ದೇನೆ ಎಂದು ವಿವರಿಸಿದರು.
ದಿಂಗಾಲೇಶ್ವರ ಶ್ರೀಗಳು ಸ್ಪರ್ಧೆ ಮಾಡುವುದು ನನಗೆ ಗೊತ್ತಿಲ್ಲ. ಮಾಧ್ಯಮಗಳ ಬಂದ ಸುದ್ದಿ ಬಂದಿದ್ದನ್ನ ನಾನು ಗಮನಿಸಿದ್ದೇನೆ ಎಂದರು.