HAPPY BIRTHDAY RASHMIKA MANDANNA: ರಶ್ಮಿಕಾ ಮಂದಣ್ಣ ಹುಟ್ಟುಹಬ್ಬ: ಪುಷ್ಪ-2 ಪೋಸ್ಟರ್ ಬಿಡುಗಡೆ

ಬೆಂಗಳೂರು : ನಟಿ ರಶ್ಮಿಕಾ ಮಂದಣ್ಣ ಅವರು ಇಂದು ತಮ್ಮ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ವಿದೇಶಕ್ಕೆ ತೆರಳಿ ಅವರು ತಮ್ಮ ಹುಟ್ಟುಹಬ್ಬವನ್ನು ಸ್ನೇಹಿತರ ಜತೆ ಸಂಭ್ರಮಿಸುತ್ತಿದ್ದಾರೆ.
ರಶ್ಮಿಕಾ ಅವರ ಹುಟ್ಟುಹಬ್ಬ ಅಂಗವಾಗಿ ಇಂದು ಪುಷ್ಪ-2 ಮತ್ತು ಜಿ ಗರ್ಲ್ ಫ್ರೆಂಡ್ ಚಿತ್ರದ ಪೋಸ್ಟರ್ ಗಳನ್ನು ಬಿಡುಗಡೆ ಮಾಡಿದ್ದರಿಂದ ಅಭಿಮಾನಿಗಳಿಗೆ ಸಂತಸ ವ್ಯಕ್ತಪಡಿಸಿದ್ದಾರೆ.

https://twitter.com/PushpaMovie/status/1776121887279763790

ಸಮಾಜಿಕ ಜಾಲತಾಣದಲ್ಲಿ ಪುಷ್ಪ-2 ಪೋಸ್ಟರ್ ಹಂಚಿಕೊಳ್ಳಲಾಗಿದೆ. ಪೋಸ್ಟರ್ ನಲ್ಲಿ ರಶ್ಮಿಕಾ ಸೀರೆಯುಟ್ಟು ವಿಶೇಷ ಗೆಟಪ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಜತೆಯಲ್ಲಿ ಮೈಮೇಲೆ ಸಾಕಷ್ಟು ಚಿನ್ನಾಭಾರಣಗಳನ್ನು ಧರಿಸಿ, ಗೌಡತಿಯಂತೆ ಫೋಸು ಕೊಟ್ಟಿದ್ದಾರೆ. ಅವರು ಬಿಡುಗಡೆ ಮಾಡಿರುವ ಪೋಸ್ಟರ್ ನಲ್ಲಿ ಅಗಸ್ಟ್ 15 ರಂದು ಸಿನೆಮಾ ರಿಲೀಸ್ ಆಗಲಿದೆ ಎಂದು ಬರೆಯಲಾಗಿದೆ. ಈ ಚಿತ್ರದಲ್ಲಿ ಅಲ್ಲು ಅರ್ಜುನ್ ನಾಯಕ ನಟನಾಗಿ ನಟಿಸುತ್ತಿದ್ದಾರೆ.
ಪುಷ್ಪ ಮೊದಲನೆಯ ಭಾಗ ಸಾಕಷ್ಟು ಹಿಟ್ ಆಗಿದ್ದು, ಬಾಕ್ಸ್ ಆಫೀಸ್ ನಲ್ಲಿ ಸಾಕಷ್ಟು ಭರ್ಜರಿ ಗಳಿಕೆ ಕಂಡಿದೆ. ಅದೇ ರೀತಿಯಲ್ಲಿ ಪುಷ್ಪ-2 ಚಿತ್ರದಲ್ಲಿ ನಿರ್ಮಾಪಕರು ಮತ್ತು ಕಲಾವಿದರು ಕನಸು ಕಾಣುತ್ತಿದ್ದಾರೆ.

https://twitter.com/GeethaArts/status/1776105009895346388

ಅದೇ ರೀತಿಯಲ್ಲಿ ರಶ್ಮಿಕಾ ಮಂದಣ್ಣ ದಿ ಗರ್ಲ್ ಫ್ರೆಂಡ್ ಚಿತ್ರದಲ್ಲೂ ನಟಿಸುತ್ತಿದ್ದಾರೆ. ಈ ಚಿತ್ರತಂಡ ಕೂಡ ಪೋಸ್ಟರ್ ಬಿಡುಗಡೆ ಮಾಡಿದ್ದು, ರಶ್ಮಿಕಾ ಹುಟ್ಟುಹಬ್ಬಕ್ಕೆ ಶುಭ ಹಾರೈಸಿದೆ.

More News