ಸ್ಥಳ- 3: ಬಿಟಿಎಂ ಮೆಟ್ರೋ ಸ್ಟೇಷನ್
ವಾರ್ಡ್- ಬಿಟಿಎಂ ಲೇಔಟ್
ವಿಧಾನಸಭೆ ಕ್ಷೇತ್ರ: ಬಿಟಿಎಂ ಲೇಔಟ್
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರು ನಗರ ಸಂಚಾರ, ಸ್ಥಳ ಪರಿಶೀಲನೆ ವೇಳೆಗೆ ಬಿಟಿಎಂ ಮೆಟ್ರೋಸ್ಟೇಷನ್‌ಗೆ ಭೇಟಿ ನೀಡಿ ಮೇಲುಸೇತುವೆ ರಸ್ತೆ ಹಾಗೂ ಮೆಟ್ರೋ ಮಾರ್ಗಗಳೆರಡೂ ಒಂದರ ಮೇಲೊಂದು ಇರುವ ಡಬಲ್ ಡೆಕ್ಕರ್ – 2 tier ವ್ಯವಸ್ಥೆಯನ್ನು ಮುಖ್ಯಮಂತ್ರಿಗಳು ಪರಿಶೀಲಿಸಿದರು. ಮೂರು ಕಿ.ಮೀ. ಉದ್ದದ ಈ ವ್ಯವಸ್ಥೆಯನ್ನು ಪರಿಶೀಲಿಸಿದ ಮುಖ್ಯಮಂತ್ರಿಗಳು, ಸಂಚಾರ ದಟ್ಟಣೆ ನಿವಾರಣೆಗೆ ಈ ಡಬ್ಬಲ್ ಡೆಕರ್ ಮಾದರಿಯನ್ನು ನಗರದ ಇತರ ಭಾಗಗಳಲ್ಲಿಯೂ ಅಳವಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಿಲ್ಕ್ ಬೋರ್ಡ್ ಜಂಕ್ಷನ್ ಸಂಚಾರ ದಟ್ಟಣೆಗೆ ಪರಿಹಾರ ರೂಪವಾಗಿ ಈ ವ್ಯವಸ್ಥೆಯನ್ನು ಅಳವಡಿಸಲಾಗುತ್ತಿದೆ.
ಇದಲ್ಲದೆ, ಸುಗಮ ಸಂಚಾರಕ್ಕಾಗಿ, ಬಿಟಿಎಂ ನಿಂದ ಬನಶಂಕರಿ ಕಡೆಗೆ ಹೋಗುವಾಗ, ರಾಘವೇಂದ್ರಸ್ವಾಮಿ ಟೆಂಪಲ್ ಸರ್ಕಲ್, ಜಯನಗರ 5ನೇ ಬ್ಲಾಕ್‌ನಲ್ಲಿ ಅಂಡರ್ ಪಾಸ್ ನಿರ್ಮಾಣಕ್ಕೆ ಬೇಡಿಕೆ ಇದ್ದು, ಇಲ್ಲಿ ಅಂಡರ್ ಪಾಸ್ ನಿರ್ಮಿಸಲು ಸೂಚಿಸಿದರು.