Suraj Revanna Case: ಸೂರಜ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ

ಬೆಂಗಳೂರು; ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಆರೋಪ ಇದ್ದು, ಇದರ  ಬೆನ್ನಲ್ಲೇ ವಿಧಾನ ಪರಿಷತ್ ಸದಸ್ಯ ಡಾ ಸೂರಜ್ ರೇವಣ್ಣ ವಿರುದ್ದ  ಸಲಿಂಗ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದೆ.  ಮಾಜಿ ಸಚಿವ ಹೆಚ್‌ ಡಿ ರೇವಣ್ಣ ಹಿರಿಯ ಪುತ್ರ  ತಮ್ಮದೇ ಪಕ್ಷದ ಕಾರ್ಯಕರ್ತ, ಯುವಕನೋರ್ವನಿಗೆ ಸಲಿಂಗ ಲೈಂಗಿಕ ದೌರ್ಜನ್ಯ ನಡೆಸಿರೋ ಬಗ್ಗೆ ಗಂಭೀರ ಆರೋಪ ಕೇಳಿಬಂದಿದೆ. ಜೂನ್ 16ರಂದು ಕೃತ್ಯ ನಡೆದಿದೆ ಎನ್ನಲಾಗಿದೆ.

ಕಿರಿಯ ಮಗ ಪ್ರಜ್ಚಲ್ ವಿರುದ್ದ ಅತ್ಯಾಚಾರ ಆರೋಪದ ಬೆನ್ನಲ್ಲೇ ಮತ್ತೋರ್ವ ಪುತ್ರನ ವಿರುದ್ಧವೂ ಗಂಭೀರ ಆರೋಪ ಕೇಳಿಬಂದಿದೆ. ಸಲಿಂಗ ಲೈಂಗಿಕತೆಯ ಆರೋಪದಲ್ಲಿ  ಹಾಸನ ಜಿಲ್ಲೆ ಅರಕಲಗೂಡು ಮೂಲದ ಜೆಡಿಎಸ್ ಕಾರ್ಯಕರ್ತನಿಗೆ ಲೈಂಗಿಕ ದೌರ್ಜನ್ಯ ನೀಡಿರುವ ಆರೋಪ ಕೇಳಿಬಂದಿದೆ. ತನ್ನ ಮೇಲೆ ಸೂರಜ್ ರೇವಣ್ಣ ದೌರ್ಜನ್ಯ  ನಡೆಸಿರುವ ಬಗ್ಗೆ ಡಿಜಿ ಮತ್ತು ಐಜಿ ಗೆ ಸಂತ್ರಸ್ಥ ದೂರು ನೀಡಿದ್ದಾನೆ. ಬಲವಂತವಾಗಿ ತನ್ನ ಮೇಲೆ ದೌರ್ಜನ್ಯ ನಡೆಸಿದ್ದಾರೆ ಎಂಬ ಬಗ್ಗೆ ದೂರು ದಾಖಲಾಗಿದೆ.

ಜೂನ್ 16 ರ ರಾತ್ರಿ ಚನ್ನರಾಯಪಟ್ಟಣ ತಾಲೂಕಿನ ಗನ್ನಿಕಡದ ಸೂರಜ್ ರೇವಣ್ಣ ತೋಟದ ಮನೆಯಲ್ಲಿ ದೌರ್ಜನ್ಯ ನಡೆಸಿರೊ ಬಗ್ಗೆ ಆರೋಪಿಸಲಾಗಿದೆ. ಈ ವಿಲಕ್ಷಣ ಆರೋಪದಿಂದ ಮತ್ತೆ ರೇವಣ್ಣ ಕುಟುಂಬ ಮುಜುಗರಕ್ಕೀಡಾಗಿದೆ. 

ತೋಟದ ಮನೆಗೆ ಕರೆಸಿಕೊಂಡು ಬಲವಂತವಾಗಿ ಲೈಂಗಿಕ ದೌರ್ಜನ್ಯ ನಡೆಸಿರೊ ಆರೋಪ ಇದೆ. ಸಿಎಂ, ಗೃಹ ಸಚಿವರು, ಡಿಜಿ ಮತ್ತು ಐಜಿಪಿ ಹಾಗೂ ಹಾಸನ ಎಸ್ಪಿಗೆ ದೂರು ನೀಡಿದ್ದಾರೆ. ಸದ್ಯ ಹಾಸನ ಜಿಲ್ಲೆಯಲ್ಲಿ  ಈ ಪ್ರಕರಣ ಭಾರೀ ಚರ್ಚೆಗೆ ಗ್ರಾಸವಾಗಿದೆ. ಈ ಸಂಬಂಧ  ಬೆಂಗಳೂರಿಗೆ ತೆರಳಿ ಸಂತ್ರಸ್ಥ ದೂರು ನೀಡಿದ್ದಾನೆ.

More News