ಸಂದಿ ಎಂದರೇನು? ಸಂದಿಗಳಲ್ಲಿ ಎಷ್ಟು ವಿಧ? ಕನ್ನಡ ಅಕ್ಷರ ಮಾಲೆಯಲ್ಲಿ ಎಷ್ಟು ಅಕ್ಷರಗಳಿವೆ? ಅವಲ್ಲಿ ಯೋಗವಾಹಗಳು ಎಷ್ಟು? ಸ್ವರ ಎಂದರೇನು? ವ್ಯಂಜನಗಳು ಎಂದರೇನು? ಎಷ್ಟಿವೆ? ವರ್ಗೀಯ, ಅವರ್ಗೀಯ ವ್ಯಂಜನಗಳು ಎಷ್ಟಿವೆ? ಅಲ್ಪಪ್ರಾಣ, ಮಹಾಪ್ರಾಣ ಎಂದರೇನು? ಅಲ್ಪ ಪ್ರಾಣಕ್ಕೆ ಉದಾಹರಣೆ ಹೇಳಿ ಎನ್ನುವ ಪ್ರಶ್ನೆಗಳನ್ನು ಮಕ್ಕಳಿಗೆ ಕೇಳಿದ ಸಿಎಂ ಮಕ್ಕಳ ಉತ್ತರಗಳನ್ನು ತಿದ್ದಿ ಹೇಳಿದರು.

ಮೊರಾರ್ಜಿ ದೇಸಾಯಿ ಶಾಲೆಗಳನ್ನು ರಾಜ್ಯದಲ್ಲಿ ಯಾರು , ಯಾವಾಗ ಆರಂಭಿಸಿದರು ಎಂದು ಸಿಎಂ ಪ್ರಶ್ನೆ.

ನೀವೇ ಆರಂಭಿಸಿದ್ದು ಎಂದ ವಿದ್ಯಾರ್ಥಿ ಇಸವಿ ಹೇಳಲಿಲ್ಲ. ಬಳಿಕ 94-95 ರಲ್ಲಿ ಆರಂಭಿಸಿದ್ದಾಗಿ ಸಿಎಂ ಹೇಳಿದರು. ಮಕ್ಕಳು ಚಪ್ಪಾಳೆ ತಟ್ಟಿದರು.
ಮಕ್ಕಳಿಗೆ ಬಸವಣ್ಣನವರ ಮಹತ್ವ ತಿಳಿಸಿದ ಸಿಎಂ

ಬಸವಣ್ಣನವರು ಸಾಮಾಜಿಕ ಕ್ರಾಂತಿ ಮಾಡಿದ್ದು ಏಕೆ ಎಂದು ಕೇಳಿದ ಸಿಎಂ. ಮನುಷ್ಯರ ನಡುವಿನ ತಾರತಮ್ಯ, ಜಾತಿ ವ್ಯವಸ್ಥೆ ವಿರೋಧಿಸಿ ಸಾಮಾಜಿಕ ಕ್ರಾಂತಿ ನಡೆಸಿದ ಬಸವಣ್ಣನವರು…ಎಂದು ಸಿಎಂ ತಾವೇ ಮಕ್ಕಳಿಗೆ ಉತ್ತರಿಸಿದರು.