FIRE IN STEEL SHOP: ಸ್ಟೀಲ್ ಅಂಗಡಿಗೆ ಆಕಸ್ಮಿಕ ಬೆಂಕಿ: ಅಪಾರ ಪ್ರಮಾಣದಲ್ಲಿ ಹಾನಿ

ಹುಬ್ಬಳ್ಳಿ: ಹುಬ್ಬಳ್ಳಿಯ ಹೃದಯ ಭಾಗದಲ್ಲಿರುವ ಸ್ಟೀಲ್ ಅಂಗಡಿಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಸಾವಿರಾರು ರೂಪಾಯಿ ಮೌಲ್ಯದ ವಸ್ತು ಸುಟ್ಟು ಕರಕಲಾಗಿದ್ದು, ಸ್ಥಳೀಯರಲ್ಲಿ ಬಹುದೊಡ್ಡ ಆತಂಕವನ್ನುಂಟು ಮಾಡಿದ ಘಟನೆ ಹುಬ್ಬಳ್ಳಿಯ ದಾಜೀಬಾನ ಪೇಟೆಯ ರಸ್ತೆಯಲ್ಲಿ ನಡೆದಿದೆ.

ಕಲಬುರಗಿ ಸ್ಟೀಲ್ ಅಂಗಡಿಗೆ ಆಕಸ್ಮಿಕ ಬೆಂಕಿ ತಗುಲಿದ್ದು, ಮೋಹನಸಾ ಕಲಬುರಗಿ ಎಂಬುವವರ ಅಂಗಡಿಗೆ ಬೆಂಕಿ ತಗುಲಿ ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ‌.

ಇನ್ನೂ ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಅಲ್ಲದೇ ಸ್ಥಳದಲ್ಲಿ ಸಾವಿರಾರು ಜನರು ಜಮಾವಣೆಗೊಂಡಿದ್ದು, ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

More News