ಸೇನಾ ಹೆಲಿಕಾಪ್ಟರ್ ದುರಂತ ರಾವತ್ ಸೇರಿ 13 ಜನರ ಸಾವು: ದಿಗ್ಬ್ರಮೆ ವ್ಯಕ್ತಪಡಿಸಿದ ಸಿಎಂ

ಸೇನಾ ಹೆಲಿಕಾಪ್ಟರ್ ದುರಂತದಿಂದ ಇದುವರೆಗೂ ಒಟ್ಟು 13 ಜನರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಹೆಲಿಕಾಪ್ಟರ್ ನಲ್ಲಿ ಒಟ್ಟು 14 ಜನರು ಪ್ರಯಾಣಿಸುತ್ತಿದ್ದು ಇವರಲ್ಲಿ ಹದಿಮೂರು ಜನರು ಸುಟ್ಟು ಕರಕಲಾಗಿದ್ದಾರೆ, ಗಂಭೀರವಾಗಿ ಗಾಯಗೊಂಡಿರುವ ಒಬ್ಬರು ಮಾತ್ರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಎಎನ್ ಐ ಸುದ್ದಿಸಂಸ್ಥೆ ವರದಿ ಮಾಡಿದೆ.
ತಮಿಳುನಾಡಿನ ಕುನ್ನೂರು ಬಳಿ ನಡೆದ ಈ ಹೆಲಿಕಾಪ್ಟರ್ ದುರಂತದಲ್ಲಿ ಮೃತರ ಗುರುತು ಪತ್ತೆಯಾಗದಂತಹ ಸ್ಥಿತಿಯಲ್ಲಿ ಮೃತದೇಹಗಳು ಇರುವುದರಿಂದ ಡಿಎನ್ ಎ ಟೆಸ್ಟ್ ಮೂಲಕ ಗುರುತು ಕಾರ್ಯ ಪತ್ತೆ ಮಾಡಲಾಗುವುದು ಎಂದು ತಿಳಿದುಬಂದಿದೆ. ಇದುವರೆಗೂ ಬಂದಿರುವ ಮಾಹಿತಿ ಪ್ರಕಾರ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಕೊನೆಯುಸಿರು ಎಳೆದಿದ್ದಾರೆ ಎಂದು ಸುದ್ದಿ ಸಂಸ್ಥೆ ವರದಿ ಮಾಡಿದೆ.


ಪ್ರಧಾನಿಯವರಿಂದ ತುರ್ತು ಸಭೆ
ಹೆಲಿಕಾಪ್ಟರ್ ದುರಂತ ಸುದ್ದಿ ಕೇಳಿಬರುತ್ತಿದ್ದಂತೆಯೇ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅಧಿಕಾರಿಗಳ ತುರ್ತು ಸಭೆ ನಡೆಸಿದ್ದಾರೆ. ಹಾಗೆಯೇ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
ದಿಗ್ಭ್ರಮೆ ವ್ಯಕ್ತಪಡಿಸಿದ ಸಿ.ಎಂ ಬಸವರಾಜ ಬೊಮ್ಮಾಯಿ
ಭಾರತೀಯ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿರುವ ಸುದ್ದಿ ಕೇಳಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಘಾತ ವ್ಯಕ್ತಪಡಿಸಿದ್ದಾರೆ.

ಇದೊಂದು ಅತ್ಯಂತ ದುರದೃಷ್ಟಕರ ಘಟನೆ ಎಂದಿದ್ದಾರೆ.

More News