ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆೆ ಆಡಳಿತಾಧಿಕಾರಿಯನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
ಈ ವಿಚಾರವಾಗಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಸಲ್ಲಿಸಿದ್ದ ತಕರಾರರು ಅರ್ಜಿಯು ನ್ಯಾಾಯಮೂರ್ತಿ ಹೇಮಂತ ಚಂದನ ಗೌಡರ್ ಅವರಿದ್ದ ಏಕಸದಸ್ಯ ನ್ಯಾಾಯಪೀಠದ ಮುಂದೆ ಸೋಮವಾರ ವಿಚಾರಣೆಗೆ ಬಂದಿತ್ತು.
ಕೆಲ ಕಾಲ ಅರ್ಜಿ ಆಲಿಸಿದ ನ್ಯಾಾಯಪೀಠ, ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆೆ ಆಡಳಿತಾಧಿಕಾರಿಯನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಅ.7ರಂದು ಹೊರಡಿಸಿದ್ದ ಆದೇಶಕ್ಕೆೆ ಮಧ್ಯಂತರ ತಡೆ ನೀಡಿ ವಿಚಾರಣೆಯನ್ನು ಅ.16ಕ್ಕೆೆ ಮುಂದೂಡಿತು.
ರಾಜ್ಯ ಸರ್ಕಾರಿ ನೌಕರರ ಸಂಘದ ಆಡಳಿತ ಮಂಡಳಿ ಅವಧಿ ಮುಕ್ತಾಾಯಗೊಂಡಿರುವುದರಿಂದ, ಸಂಘದ ಸದಸ್ಯರು ಹಾಗೂ ಸಾರ್ವಜನಿಕರ ಹಿತದೃಷ್ಟಿಿಯಿಂದ ಹೊಸ ಆಡಳಿತ ಮಂಡಳಿ ರಚನೆಯಾಗುವವರೆಗೆ ಕೆಎಎಸ್ ಅಧಿಕಾರಿ ಸಿ.ಎನ್. ಮಂಜುನಾಥ್ ಅವರನ್ನು ಆಡಳಿತಾಧಿಕಾರಿಯನ್ನಾಾಗಿ ನೇಮಕ ಮಾಡಿ ಸಹಕಾರ ಇಲಾಖೆ ಅ.7ರಂದು ಆದೇಶ ಹೊರಡಿಸಿತ್ತು. ಅದನ್ನು ಪ್ರಶ್ನಿಿಸಿ ಸರ್ಕಾರಿ ನೌಕರರ ಸಂಘ ಹೈಕೋರ್ಟ್ ಮೆಟ್ಟಿಿಲೇರಿತ್ತು.




