ಬೆಳಗಾವಿ: ಸಿದ್ದಗಂಗಾ ಮಠಕ್ಕೆ ಕೆ.ಐಎ.ಡಿ.ಬಿ ಕೊಟ್ಟ ನೋಟಿಸ್ ವಾಪಸ್ ಪಡೆಯಲಾಗುವುದು ಎಂದು ಕೈಗಾರಿಕಾ ಸಚಿವ ಸಚಿವ ಎಂಬಿ ಪಾಟೀಲ್ ತಿಳಿಸಿದರು.
ಬೆಳಗಾವಿ ಸುವರ್ಣ ಸೌಧದಲ್ಲಿ ಗುರುವಾರ ಮಾತನಾಡಿದ ಎಂಬಿ ಪಾಟೀಲ್, ಏಪ್ರಿಲ್ ನಲ್ಲಿ ಕೊಟ್ಟ ನೋಟಿಸ್ ಇದಾಗಿದೆ. ಕೆರೆಯಿಂದ ನೀರು ಬಳಕೆ ಮಾಡಿರುವುದಕ್ಕೆ ಈ ನೋಟಿಸ್ ಕೊಡಲಾಗಿದೆ. ಆದರೆ ಅದನ್ನು ವಾಪಸ್ ಪಡೆದುಕೊಳ್ಳುತ್ತೇವೆ ಎಂದರು.
ಸಿದ್ದಗಂಗಾ ಮಠ ವಿಶ್ವಕ್ಕೆ ಮಾದರಿಯಾದ ಮಠವಾಗಿದೆ. ಮಕ್ಕಳಿಗೆ ಶಿಕ್ಷಣ, ದಾಸೋಹ ಕೊಡುತ್ತಿರುವ ಮಠವಾಗಿದೆ. ಈ ಬಗ್ಗೆ ಮುಖ್ಯ ಇಂಜಿನಿಯರ್ ಸ್ವಾಮೀಜಿ ಜೊತೆ ಮಾತನಾಡಿದ್ದಾರೆ ಎಂದರು.
ಸಿದ್ದಗಂಗಾ ಮಠ ನೀರನ್ನು ಬಳಸಿಕೊಂಡರೂ ತಪ್ಪಲ್ಲ. ಈ ಕುರಿತಾಗಿ ಸ್ವಾಮೀಜಿ ಜೊತೆಗೆ ಮಾತನಾಡುತ್ತೇನೆ. ಒಂದು ವೇಳೆ ನೀರು ಬಳಸದೆ ನೋಟಿಸ್ ಕೊಟ್ಟರೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.




