PARAMESHWAR ON PRAHLAD JOSHI: ಪ್ರಹ್ಲಾದ್ ಜೋಶಿ ಅಸಮರ್ಥ ಕೇಂದ್ರ ಸಚಿವ ಎಂದರೆ ಒಪ್ಪಿಕೊಳ್ತಾರಾ..? ಪರಮೇಶ್ವರ ಪ್ರಶ್ನೆ

ಹುಬ್ಬಳ್ಳಿ :ಪ್ರಹ್ಲಾದ್ ಜೋಶಿ ಅಸಮರ್ಥ ಕೇಂದ್ರ ಸಚಿವ ಎಂದರೆ ಒಪ್ಪಿಕೊಳ್ತಾರಾ..ಎಂದು
ಹುಬ್ಬಳ್ಳಿಯಲ್ಲಿ ಗೃಹ ಸಚಿವ ಜಿ.ಪರಮೇಶ್ವರ ಮಾಧ್ಯಮ ಪ್ರತಿನಿಧಿಗಳಿಗೆ ಪ್ರಶ್ನೆ ಮಾಡಿದರು.
ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು,
ಜಿ.ಪರಮೇಶ್ವರ ಅಸಮರ್ಥ ಗೃಹ ಸಚಿವ ಎಂಬ ಜೋಶಿ‌ ಲೇವಡಿ ವಿಚಾರವಾಗಿ ಪ್ರತಿಕ್ರಿಯೆ ಕೊಟ್ಟ ಅವರುಪ್ರಹ್ಲಾದ್ ಜೋಶಿ ಅಸಮರ್ಥ ಕೇಂದ್ರ ಸಚಿವ ಎಂದರೆ ಒಪ್ಪಿಕೊಳ್ತಾರಾ..?ಎಂದರು
ತಮ್ಮನ್ನ ಅಸಮರ್ಥ ಸಚಿವ ಎಂಬ ಹೇಳಿಕೆಗೆ ಜೋಶಿಗೆ ತಿರುಗೇಟು‌ ನೀಡಿದ ಜಿ.ಪರಮೇಶ್ವರ ಅವರು
ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ ಅದಕ್ಕೆ ಅವರು ಹಾಗೆ ಹೇಳಿದ್ದಾರೆ ವಿಧಾನ ಸಭಾ ಪರಿಷತ್ ಸದಸ್ಯ ಸಿಟಿ ರವಿ ಪ್ರಕರಣವನ್ನ ಈಗಾಗಲೇ ಸಿಓಡಿ ತನಿಖೆಗೆ ಒಪ್ಪಿಸಲಾಗಿದ್ದುಸಿಟಿ ರವಿ ಪ್ರಕರಣದ ಬಗ್ಗೆ ಹೆಚ್ಚು ವ್ಯಾಖ್ಯಾನ ಮಾಡಲ್ಲ
ತನಿಖೆ ನಡೆಯುವಾಗ ನಾವು ಹೇಳಿಕೆಗಳನ್ನ ನೀಡುವುದು ಸರಿಯಲ್ಲ
ಸಿಟಿ ರವಿ ಪ್ರಕರಣ ಮುಗಿದ ಅಧ್ಯಾಯ ಎಂಬ ಸ್ಪೀಕರ್ ಹೇಳಿಕೆ ವಿಚಾರವಾಗಿ ಸಹ‌ ಮಾತನಾಡಿದ ಅವರು
ಸ್ಪೀಕರ್ ಅವರು ತಮ್ಮ‌ ಕೆಲಸ ತಾವು ಮಾಡುತ್ತಾರೆ
ಪೊಲೀಸರು ತಮ್ಮ ಕರ್ತವ್ಯ ನಿರ್ವಹಿಸುತ್ತಾರೆಅಲ್ಲಿಯ ಸಾಧಕ‌ ಬಾಧಕಗಳನ್ನ ನೋಡಿಕೊಂಡು ಹೇಳಿಕೆ ಕೊಟ್ಟಿರಬಹುದುಕಾನೂನು ಪ್ರಕ್ರಿಯೆ ನಡೆಯುವಾಗ ಕೆಲವು ವಿಳಂಬವಾಗಬಹುದು ಆದ್ರೆ ತನಿಖೆಯನ್ನ ಸರಿಯಾಗಿ ಮಾಡಬೇಕಾಗುತ್ತೆ
ಪ್ರಕರಣದ ಸತ್ಯಾಸತ್ಯತೆ ನೋಡಬೇಕಿದೆ
ಸಿಟಿ ರವಿ ಆ ರೀತಿ ಹೇಳಿಲ್ಲ ಅಂತಾರೆ ಸಚಿವೆಹೆಬ್ಬಾಳಕರ್ ಪಕ್ಕದಲ್ಲಿದ್ದವರು ಆ ಮಾತು ಆಡಿದ್ದಾರೆ ಅಂತ ಹೇಳ್ತಾರೆ
ಈ ಎಲ್ಲ ವಿಚಾರಗಳ ಬಗ್ಗೆ ತನಿಖೆ ಆಗಲೆಂದೇ ಸಿಓಡಿಗೆ ಹಸ್ತತರ ಮಾಡಲಾಗಿದೆ ಎಂದ ಅವರು
ಸಿಟಿ ರವಿ ಹಲ್ಲೆ ಮಾಡಿದವರ ಮೇಲೆ ಪ್ರಕರಣ ವಿಳಂಬ ವಿಚಾರದಲ್ಲಿ
ಕೆಲವೊಂದು ಕಾರಣಕ್ಕೆ ವಿಳಂಬವಾಗಿರಬಹುದು
ಗೃಹ ಇಲಾಖೆಯಲ್ಲಿ ಹಸ್ತಕ್ಷೇಪ ಆರೋಪ ಮಾಡಲಾಗಿದ್ದು ಆದರೆ ಇದುಪೊಲೀಸ್ ಇಲಾಖೆ ಜವಾಬ್ದಾರಿಯುತ ಇಲಾಖೆ
ಸಿಎಂ‌ ಅಥವಾ ಗೃಹ ಸಚಿವರ ಆದೇಶವನ್ನ ಮಾತ್ರ ಪೊಲೀಸರು ಪಾಲನೆ ಮಾಡುತ್ತಾರೆಬೇರೆ ಯಾರೇ ಆದೇಶ ಮಾಡಿದ್ರೂ ಅದನ್ನ ಪಾಲನೆ ಮಾಡಲ್ಲಅವರಿವರು ಆರೋಪ ಮಾಡ್ತಾರೆ ಅಂತಾ ನಾವು ಇಲಾಖೆ ನಡೆಸಲ್ಲ
ಕಾನೂನು ಚೌಕಟ್ಟಿನಲ್ಲಿ ನಾವು ಕೆಲಸ ಮಾಡುತ್ತೇವೆ ಎಂದರು

More News