LAKSHMI HEBBALKAR: ತನಿಖಾ ತಂಡಕ್ಕೆ ಘಟನೆಯ ಮಾಹಿತಿ ನೀಡಿದ್ದೇನೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಂಗಳೂರು: ತನಿಖಾ ತಂಡಕ್ಕೆ ಘಟನೆಯ ಕುರಿತು ಸಂಪೂರ್ಣ ಮಾಹಿತಿ ನೀಡಿದ್ದೇನೆ. ಕಾನೂನು ಚೌಕಟ್ಟಿನಲ್ಲಿ ಕ್ರಮ ಆಗಲಿದೆ ಎನ್ನುವ ವಿಶ್ವಾಸವಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಪ್ರತಿಕ್ರಿಯಿಸಿದ್ದಾರೆ.

ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದ ಕಲಾಪದ ವೇಳೆ ಸಚಿವರ ವಿರುದ್ಧ ಬಿಜೆಪಿಯ ವಿಧಾನ ಪರಿಷತ್ ಸದಸ್ಯರಾದ ಸಿ.ಟಿ.ರವಿ ಅಶ್ಲೀಲ ಪದ ಬಳಿಸಿದ್ದರು. ಈ ಕುರಿತು ಸಿಒಡಿ ತನಿಖೆಗೆ ರಾಜ್ಯ ಸರ್ಕಾರ ಆದೇಶಿಸಿತ್ತು‌. ಇದರ ಭಾಗವಾಗಿ ಸಿಒಡಿ ಅಧಿಕಾರಿಗಳಿಗೆ ಮಾಹಿತಿ ನೀಡಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವರು, ಅಧಿಕಾರಿಗಳ ಎದುರು ಘಟನೆ ಬಗ್ಗೆ ವಿವರಣೆ ನೀಡಿರುವೆ ಎಂದರು‌.

ಪ್ರಕರಣದ ಬಗ್ಗೆ ಕಾನೂನು ಚೌಕಟ್ಟಿನಲ್ಲಿ ಏನಾಗಬೇಕು ಅದು ಆಗುತ್ತೆ. ನನಗೆ ಅನ್ಯಾಯ ಆಗಿದೆ, ಇದು ಇಡೀ ಮನುಕುಲಕ್ಕೆ ಆಗಿರುವ ಅನ್ಯಾಯ. ನನ್ನ ಜೊತೆ ಎಲ್ಲರೂ ನಿಂತುಕೊಳ್ಳಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಪ್ರಕರಣವನ್ನು ಪ್ರತಿಷ್ಠೆಯಾಗಿ, ರಾಜಕೀಯವಾಗಿ ತೆಗೆದುಕೊಂಡಿಲ್ಲ. ನನಗೆ ಅನ್ಯಾಯ ಆಗಿದೆ. ಇದು ನನ್ನ ಸ್ವಾಭಿಮಾನದ ಪ್ರಶ್ನೆ. ತನಿಖೆ ಈಗಷ್ಟೇ ಆರಂಭವಾಗಿದೆ. ತನಿಖೆ ಸೂಕ್ತ ರೀತಿಯಲ್ಲಿ ನಡೆಯಲಿ. ಈ ಹಂತದಲ್ಲಿ ಹೆಚ್ಚು ಮಾತನಾಡುವುದು ಸರಿಯಲ್ಲ ಎಂದು ಸಚಿವರು ತಿಳಿಸಿದರು.

More News

You cannot copy content of this page