DARSHAN IN COURT: ರೇಣುಕಾಸ್ವಾಮಿ ಹತ್ಯೆ ಪ್ರಕರಣ ; ದರ್ಶನ್ ಆ್ಯಂಡ್ ಟೀಂ ನ್ಯಾಯಾಲಯದ ಮುಂದೆ ಹಾಜರು

ಬೆಂಗಳೂರು : ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿಗಳಾದ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಬಹುತೇಕ ಆರೋಪಿಗಳು ಇಂದು ನಗರದ 57ನೇ ಸಿಸಿಹೆಚ್ ನ್ಯಾಯಾಲಯದ ಮುಂದೆ ಹಾಜರಾಗಿದ್ದಾರೆ. ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಕೆಲ ಆರೋಪಿಗಳು ಜಾಮೀನು ಪಡೆದಿದ್ದು, ಪ್ರತಿ ತಿಂಗಳು ನ್ಯಾಯಾಲಯದ ಮುಂದೆ ಹಾಜರಾಗಬೇಕು ಎಂಬ ಷರತ್ತು ವಿಧಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಇಂದು ಬಹುತೇಕ ಎಲ್ಲರೂ ನ್ಯಾಯಾಲಯದ ಮುಂದೆ ಹಾಜರಾಗಿದ್ದಾರೆ.ಸದ್ಯ ಪ್ರಕರಣದ ವಿಚಾರಣೆಯನ್ನ ಏಪ್ರಿಲ್ 8ಕ್ಕೆ ಮುಂದೂಡಲಾಗಿದೆ

ಆರೋಪಿಗಳಿಗೆ ಮಾಫಿ ಸಾಕ್ಷಿಯಾಗುವಂತೆ ಬೆದರಿಕೆ

ಪ್ರಕರಣದ ಕೆಲವು ಆರೋಪಿಗಳಿಗೆ ಮಾಫಿ ಸಾಕ್ಷಿಯಾಗುವಂತೆ ಬೆದರಿಸಲಾಗುತ್ತಿದೆ ಎಂದು ನ್ಯಾಯಾಲಯದ ಗಮನಕ್ಕೆ ತಂದಿರುವುದಾಗಿ ದರ್ಶನ್ ಅವರ ಪರ ವಕೀಲ ಸುನೀಲ್ ತಿಳಿಸಿದರು.ಕೆಲವು ಆರೋಪಿಗಳಿಗೆ ಪೊಲೀಸರು, ವಕೀಲರ ಹೆಸರಿನಲ್ಲಿ ಸಂಪರ್ಕಿಸಿ ಮಾಫಿ ಸಾಕ್ಷಿಯಾಗುವಂತೆ ಬೆದರಿಸಲಾಗುತ್ತಿದೆ. ಅದರ ಕುರಿತು ನ್ಯಾಯಾಲಯದ ಗಮನಕ್ಕೆ ತರಲಾಗಿದೆ ಮತ್ತು ಸಂಬಂಧಿಸಿದಂತೆ ಅರ್ಜಿಯನ್ನೂ ಸಲ್ಲಿಸಲಿದ್ದೇವೆ ಎಂದು ಅವರು ತಿಳಿಸಿದರು.

More News