456ಕೆಜಿ ಗಾಂಜಾ ವಶ: ನಾಲ್ವರು ಆರೋಪಿಗಳನ್ನು ಬಂಧಿಸಿದ ಹುಮ್ನಾಬಾದ್ ಪೊಲೀಸರು

ಬೀದರ್: ತೆಲಂಗಾಣದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಹುಮ್ನಾಬಾದ್ ಪೊಲೀಸರು ಹೊರವಲಯದ ರಾಷ್ಟ್ರೀಯ ಹೆದ್ದಾರಿ 65ರಲ್ಲಿ ಮಿಂಚಿನ ಕಾರ್ಯಾಚರಣೆ ನಡೆಸಿ, ಲಕ್ಷಾಂತರ ರೂಪಾಯಿ ಮೌಲ್ಯದ 456 ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಿದ ಪೊಲೀಸ್ ಅಧಿಕಾರಿಗಳು ಮಿಂಚಿನ ಕಾರ್ಯಾಚರಣೆ ನಡೆಸಿ ಬಂಧಿಸಲಾಗಿದೆ ಎಂದು ಬೀದರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ ಎಲ್ ನಾಗೇಶ್ ತಿಳಿಸಿದ್ದಾರೆ.


ತೆಲಂಗಾಣದ ವಿಶಾಖಪಟ್ಟಣಂದಿಂದ ಮಹಾರಾಷ್ಟ್ರದ ಸೊಲ್ಲಾಪುರಕ್ಕೆ ಮೂರು ಕಾರುಗಳಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡಲಾಗುತ್ತಿತ್ತು.

ಬಂಧನಕ್ಕೊಳಗಾದ ಆರೋಪಿಗಳಿಂದ ಒಟ್ಟು ಸುಮಾರು 23 ಲಕ್ಷ ರೂಪಾಯಿ ಮೌಲ್ಯದ 456 ಕೆಜಿ ಗಾಂಜಾ, ಮೂರು ಕಾರುಗಳು ಹಾಗೂ 10,250 ನಗದು ಹಣ ಜಪ್ತಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಬೀದರ ಜಿಲ್ಲಾ ಎಸ್.ಪಿ ಅವರ ಮಾರ್ಗದರ್ಶನ ಮೇರೆಗೆ ಹುಮ್ನಾಬಾದ್ ಸಿಪಿಐ ಮಲ್ಲಿಕಾರ್ಜುನ ಯಾತನೂರ ಹಾಗೂ ಪಿಎಸ್‌ಐ ರವಿಕುಮಾರ ನಾಯ್ಕೋಡಿ ಅವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

More News