ಬೆಂಗಳೂರು : ಆರ್ ಸಿ ಬಿ ಗೆಲುವಿನ ಸಂಭ್ರಮಾಚರಣೆ ಸಂದರ್ಭದಲ್ಲಿ ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ಘಟನೆಯಲ್ಲಿ ನಿವೃತ್ತ ನ್ಯಾಯಮೂರ್ತಿ ಮೈಕೆಲ್ ಡಿ ಕುನ್ಹಾ ವರದಿಯಲ್ಲಿ ಉಲ್ಲೇಖ ಮಾಡಿರುವ ಸರ್ಕಾರಿ ಅಧಿಕಾರಿಗಳ ವಿರುದ್ಧ ಇಲಾಖಾ ವಿಚಾರಣೆ ನಡೆಸಲು ಸಚಿವ ಸಂಪುಟ ಸಭೆ ತೀರ್ಮಾನ ಕೈಗೊಂಡಿದೆ.
ಗುರುವಾರ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಸರ್ಕಾರಿ ಅಧಿಕಾರಿಗಳ ವಿರುದ್ಧ ಇಲಾಖಾ ವಿಚಾರಣೆ ನಡೆಸಲು ಸಂಪುಟ ಮಹತ್ವದ ಒಪ್ಪಿಗೆ ನೀಡಿದೆ ಹಾಗೂ ಒಳಾಡಳಿತ ಇಲಾಖೆಗೆ ಸೂಚನೆ ನೀಡಲು ತೀರ್ಮಾನ ಮಾಡಲಾಗಿದೆ.
ಸಚಿವ ಸಂಪುಟ ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್ ಕೆ ಪಾಟೀಲ್ ಮಾತನಾಡಿ, ಮೈಕೆಲ್ ಡಿ ಕುನ್ಹಾ ವರದಿಯಲ್ಲಿ ಉಲ್ಲೇಖ ಮಾಡಿರುವ ಖಾಸಗಿ ಸಂಸ್ಥೆಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಸಂಪುಟ ಒಪ್ಪಿಗೆ ನೀಡಲಾಗಿದೆ ಎಂದು ಸಚಿವರು ತಿಳಿಸಿದರು.




