ಹಿರಿಯ ರಾಜಕೀಯ ಮುತ್ಸದ್ದಿ ಶಾಮನೂರು ಶಿವಶಂಕರಪ್ಪ ನಿಧನಕ್ಕೆ ಸಚಿವ ಶಿವರಾಜ ತಂಗಡಗಿ ಶೋಕ

ಹಿರಿಯ ರಾಜಕೀಯ ಮುತ್ಸದ್ದಿ, ಮಾಜಿ ಸಚಿವ, ಮಾಜಿ ಸಂಸದ,
ಶ್ರೀ ಶಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.
ಶಾಮನೂರು ಶಿವಶಂಕರಪ್ಪ ನಮ್ಮ ಪಕ್ಷದ ಹಿರಿಯರು ಮಾತ್ರವಲ್ಲ, ಅವರು ಇಡೀ ಪೀಳಿಗೆಯನ್ನೇ ಪ್ರಭಾವಿಸಿದವರು. ರಾಜಕೀಯ,ಶೈಕ್ಷಣಿಕ ಮತ್ತು ಸಾಮಾಜಿಕ ವಲಯಗಳನ್ನು ಅವರು ಪ್ರಭಾವಿಸಿದ ರೀತಿ ಅನನ್ಯವಾದುದ್ದು.
ಅನೇಕ ಜನಪರ ಯೋಜನೆಗಳನ್ನು ಅನುಷ್ಠಾನಗೊಳಿಸಿದ ಕೀರ್ತಿ ಅವರದು.. ವಿಶೇಷವಾಗಿ ಶೈಕ್ಷಣಿಕ ಮತ್ತು ಆರೋಗ್ಯ ಕ್ಷೇತ್ರಕ್ಕೆ ಅವರು ನೀಡಿದ ಕೊಡುಗೆ ಗಮನ ಸೆಳೆಯುವಂತಹದ್ದು. ಅಪಾರವಾದ ಅಭಿಮಾನಿ ಬಳಗ ಹೊಂದಿರುವ ಶ್ರೀ ಶಾಮನೂರು ಶಿವಶಂಕರಪ್ಪ ಅವರು ಈ ನಾಡು ಕಂಡ ಅಪರೂಪದ ಜನನಾಯಕರಲ್ಲಿ ಒಬ್ಬರು.
ಅವರ ಆತ್ಮಕ್ಕೆ ಶಾಂತಿ ದೊರೆಯಲಿ, ಅವರ ಕುಟುಂಬ ಹಾಗೂ ಅವರ ಅಭಿಮಾನಿ ಬಳಗಕ್ಕೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಚಿವ ಶಿವರಾಜ ತಂಗಡಗಿ ತಮ್ಮ ಶೋಕ ಸಂದೇಶದಲ್ಲಿರುವ ತಿಳಿಸಿದ್ದಾರೆ.

More News