ಕನ್ನಡ ವಿರೋಧಿಗಳ ವಿರುದ್ಧ ಕ್ರಮಕೈಗೊಳ್ಳಲಾಗಿದೆ, ಬಂದ್ ನಡೆಸುವುದು ಬೇಡ: ಸಿಎಂ ಮನವಿ

ಬೆಂಗಳೂರು :ಪ್ರತಿಯೊಂದು ವಿಚಾರಕ್ಕೂ ಬಂದ್ ನಡೆಸುವುದು ಅಂತಿಮ ನಿರ್ಧಾರವಾಗುವುದು ಬೇಡ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳುವುದರ ಮೂಲಕ ಡಿಸೆಂಬರ್ 31ರಂದು ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಬಂದ್ ಕೈಬಿಡುವಂತೆ ಮನವಿ ಮಾಡಿದ್ದಾರೆ.
ಹುಬ್ಬಳ್ಳಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕನ್ನಡ ವಿರೋಧಿಗಳ ವಿರುದ್ಧ ಈಗಾಗಲೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ, ಬಂದ್ ನಡೆಸುವುದು ಬೇಡ, ಇದನ್ನೇ ಬೇರೆ ರೂಪದಲ್ಲಿ ಒತ್ತಡ ಹಾಕಿ, ಎಂಇಎಸ್ ಸಂಘಟನೆಯನ್ನು ಬ್ಯಾನ್ ಮಾಡುವುದರ ಕುರಿತು ಪರಿಶೀಲನೆ ನಡೆಯುತ್ತಿದೆ ಎಂದು ಸ್ಪಷ್ಟಪಡಿಸಿದರು.
ಕಾರ್ಮಿಕರಿಗೆ ಬೇಕಾದ ಎಲ್ಲ ಸವಲತ್ತುಗಳು ಒಂದೇ ಸೂರಿನಡಿ ಲಭ್ಯ
ಕಾರ್ಮಿಕ ಇಲಾಖೆ ಅದ್ಭುತವಾಗಿ ಕೆಲಸ ಮಾಡುತ್ತಿದ್ದು, ಕಾರ್ಮಿಕರಿಗೆ ಬೇಕಾದ ಎಲ್ಲ ಸವಲತ್ತುಗಳು ಒಂದೇ ಸೂರಿನಡಿ ದೊರಕಲು ಅನುಕೂಲವಾಗುವಂತೆ ಕಾರ್ಮಿಕ ಭವನವನ್ನು ನಿರ್ಮಿಸಲಾಗಿದೆ. ರಾಜ್ಯದಲ್ಲಿ ಈಗಾಗಲೇ 8 ಕಾರ್ಮಿಕ ಭವನಗಳನ್ನು ನಿರ್ಮಿಸಲಾಗಿದೆ. ಬರುವ ದಿನಗಳಲ್ಲಿ ಉಳಿದೆಲ್ಲ ಜಿಲ್ಲೆಗಳಲ್ಲಿಯೂ ಕಾರ್ಮಿಕ ಭವನವನ್ನು ನಿರ್ಮಿಸಲಾಗುವುದು ಎಂದು ತಿಳಿಸಿದರು.


ನಂತರ ಅವರು ವೈದ್ಯಕೀಯ ಸೌಲಭ್ಯಗಳನ್ನು ಪೂರೈಸುವ ಸಂಚಾರಿ ಚಿಕಿತ್ಸಾ ಘಟಕಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕಾರ್ಮಿಕ ರಕ್ಷಣೆ ಹಾಗೂ ಕಾರ್ಮಿಕ ಕಲ್ಯಾಣ, ಕೋವಿಡ್ ನ ಸಂದರ್ಭದಲ್ಲಿ ಕಾರ್ಮಿಕರಿಗೆ ಪರಿಹಾರ ನೀಡಲು ಶ್ರಮಿಸುತ್ತಿರುವ ಕಾರ್ಮಿಕ ಸಚಿವರ ಸೇವೆ ಶ್ಲಾಘನೀಯ ಎಂದು ತಿಳಿಸಿದರು.


ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ನೇತೃತ್ವದಲ್ಲಿ ಭಾಜಪದ ಕಾರ್ಯಕಾರಿಣಿ ಸಭೆ ನಡೆದಿದೆ.

ಪಕ್ಷ ಬಲಿಷ್ಟವಾಗಿ ಬೆಳೆಯಬೇಕು, ಪಕ್ಷ ಮತ್ತು ಆಡಳಿತದಲ್ಲಿ ಸಂಯೋಜನೆ, ಪಕ್ಷ ಸಂಘಟನೆಯಿಂದ ಚುನಾವಣೆ, ರಾಜಕೀಯ ಬೆಳವಣಿಗೆಗಳನ್ನು ಒಗ್ಗಟ್ಟಿನಿಂದ ಎದುರಿಸಬೇಕೆನ್ನುವ ವರಿಷ್ಠರ ನಿರೀಕ್ಷೆಯನ್ನು ಕಾರ್ಯರೂಪಕ್ಕೆ ತರಲಾಗುವುದು ಎಂದು ತಿಳಿಸಿದರು.

More News