ಜನಸಂಪರ್ಕ ಬೆಳೆಸಿಕೊಳ್ಳಿ-ವಾರದಲ್ಲಿ ಕನಿಷ್ಟ ಮೂರು ದಿನ ಗ್ರಾಮಗಳಿಗೆ ಪ್ರವಾಸ ಕೈಗೊಳ್ಳಿ : ಸಿಇಓಗಳಿಗೆ ಮುಖ್ಯಮಂತ್ರಿ ಸಲಹೆ

ಬೆಂಗಳೂರು : ಸಿಇಓಗಳು ಜನಸಂಪರ್ಕ ಹೊಂದಬೇಕು.ಹಳ್ಳಿಗರು ಸಮಸ್ಯೆಯ ಜೊತೆ ಜೀವನ ಮಾಡುತ್ತಾರೆ.ಸಮಸ್ಯೆಯ ಬಗ್ಗೆ ಚರ್ಚೆ ಮಾಡುವುದು ಬೇರೆ.ಸಮಸ್ಯೆಯ ಜೊತೆ ಬದುಕುವುದು ಬೇರೆ. ಅಧಿಕಾರಿಗಳು ತಳಮಟ್ಟಕ್ಕೆ ಹೋಗಿ ಸಮಸ್ಯೆಗಳ ಪರಿಹಾರದ ಬಗ್ಗೆ ಚಿಂತನೆ ಮಾಡಬೇಕು ಎಂದು ಕಾರ್ಯನಿರ್ವಹಣಾಧಿಕಾರಿಗಳಿಗೆ ಸಲಹೆ ನೀಡಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆ ನಡೆಸಿ,ವಿವಿಧ ವಿಷಯಗಳ ಚರ್ಚೆ ನಡೆಸಿದ ನಂತರ ಮಾತನಾ ಡಿದ ಅವರು,ಹಳ್ಳಿಗರು ಸಮಸ್ಯೆಯ ಜೊತೆ ಜೀವನ ಮಾಡುತ್ತಾರೆ.ಸಮಸ್ಯೆಯ ಬಗ್ಗೆ ಚರ್ಚೆ ಮಾಡುವುದು ಬೇರೆ.ಸಮಸ್ಯೆಯ ಜೊತೆ ಬದುಕುವುದು ಬೇರೆ.ಆದ್ದರಿಂದ ಅವರ ಸಮಸ್ಯೆ ಬಗೆಹರಿಸಲು ಶ್ರಮಿಸಬೇಕು.ವಾರದಲ್ಲಿ ಮೂರು ದಿನ ಹಳ್ಳಿಗಳಿಗೆ ಭೇಟಿ ನೀಡ ಬೇಕು.ದಿಢೀರ್ ಭೇಟಿ ನೀಡಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲಿಸಿ.ಮಾನವೀಯತೆಯಿಂದ ಪರಿಹಾರದ ಚಿಂತನೆ ಮಾಡಿ,ಸಮಸ್ಯೆ ಬಗೆಹರಿಸುವ ಇಚ್ಛಾಶಕ್ತಿ ಇರಬೇಕು.ಗ್ರಾಮೀಣ ಜನರ  ಬದುಕನ್ನುಹಸನು ಮಾಡುವ ಜವಾಬ್ದಾರಿ ನಿಮ್ಮ ಮೇಲಿದೆ ಎಂದು ಅಧಿಕಾರಿಗಳಿಗೆ ಸೂಚ್ಯವಾಗಿ ತಿಳಿಸಿದರು.

ಜಿಲ್ಲೆಗಳಲ್ಲಿ ಅನೇಕ ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವುದು ಅಭಿನಂದನೀಯ. ಜಲಜೀವನ ಮಿಷನ್,ವಸತಿ, ಶಾಲೆಗಳ ದುರಸ್ತಿ ಸೇರಿದಂತೆ ಇಂದು ನಿಗದಿಪಡಿಸಿರುವ ಗುರಿಯನ್ನು ನಿಗದಿತ ಸಮಯದೊಳಗೆ ಪೂರ್ಣಗೊಳಿಸಬೇಕು.ಎನ್ ಆರ್ ಇ ಜಿ ಯೋಜನೆಯಡಿ ಕ್ರಿಯಾತ್ಮಕವಾಗಿ ಕಾರ್ಯಕ್ರಮ ಗಳನ್ನು ರೂಪಿಸಿ.ಸರ್ಕಾರದ ಕಟ್ಟಡಗಳ ಆಸ್ತಿ ಸೃಜನೆಯ  ಬಗ್ಗೆ ಗಮನ ನೀಡಬೇಕು.ಸ್ತ್ರೀ ಶಕ್ತಿ  ಮಾನವ ಸಂಪನ್ಮೂಲದ ದೊಡ್ಡ ಆಸ್ತಿ.ಎಸ್ ಸಿ ಎಸ್ ಟಿ,ಓಬಿಸಿ ಮಹಿಳೆಯನ್ನು ಆರ್ಥಿಕವಾಗಿ ಸಬಲರಾಗಿಸ ಬೇಕು. ಕರ್ನಾಟಕ ರಾಜ್ಯ ತಲಾವಾರು ಆದಾಯದಲ್ಲಿ 4 ನೇ ಸ್ಥಾನದಲ್ಲಿದೆ.ತಲಾವಾರು ಆದಾಯಕ್ಕೆ ಕೇವಲ 30 % ಜನ ಮಾತ್ರ ಕೊಡುಗೆ ನೀಡುತ್ತಿದ್ದಾರೆ.ಉಳಿದ ಶೇ.70 ರಷ್ಟು ಜನ ದಿನನಿತ್ಯದ ಬದುಕಿಗೆ ದುಡಿಯುವುದಾಗಿದೆ. ಈ ವರ್ಗದವರಿಗೆ ಆರ್ಥಿಕ ನೆರವು, ತರಬೇತಿ ನೀಡಿದರೆ ಅವರ ಜೀವನ ಮಟ್ಟ ಸುಧಾರಿಸುತ್ತದೆ.ಕೃಷಿಯಲ್ಲಿ ಶೇ.1 ರಷ್ಟು ಅಭಿವೃದ್ಧಿಯಾದರೆ,ಕೈಗಾರಿಕೆಗಳಲ್ಲಿ ಶೇ.4 ರಷ್ಟು ಹಾಗೂ ಸೇವಾ ಕ್ಷೇತ್ರದಲ್ಲಿ ಶೇ.10 ರಷ್ಟು ಅಭಿವೃದ್ಧಿಯಾಗುತ್ತದೆ ಎಂದು ಆಶಯ ವ್ಯಕ್ತಪಡಿಸಿದರು.

ಸಿಇಓಗಳು ತಮ್ಮ ಜಿಲ್ಲಾ ವ್ಯಾಪ್ತಿಯಲ್ಲಿ ಕನಿಷ್ಟ ಶೇ.1 ರಷ್ಟಾದರೂ ಕೃಷಿ ಕ್ಷೇತ್ರದಲ್ಲಿ ಅಭಿವೃದ್ಧಿಪಡಿಸಿದರೆ, ಗ್ರಾಮೀಣ ಜನರ ಜೀವನದಲ್ಲಿ ಬದಲಾವಣೆ ತಂದಂತಾಗುತ್ತದೆ.ಜನರಿಗೆ ಇದರಿಂದ ವ್ಯವಸ್ಥೆಯ ಮೇಲೆ ವಿಶ್ವಾಸ ಮೂಡಿಸಲು ಸಾಧ್ಯ.ಪ್ರಧಾನಿ ಯವರು ಮಧ್ಯವರ್ತಿಗಳ ಹಾವಳಿ ತಡೆಯಲು ಡಿಬಿಟಿ ವ್ಯವಸ್ಥೆ ಜಾರಿಗೆ ತಂದರು.ಅಂತೆಯೇರೈತರ ಸಂಕಷ್ಟವನ್ನು ಕಣ್ಣಾರೆ ಕಂಡು,ಅವರ ಮಕ್ಕಳ ಶಿಕ್ಷಣಕ್ಕೆ ನೆರವಾಗಲು ರೈತ ವಿದ್ಯಾನಿಧಿ ಜಾರಿಗೆ ತರಲಾಗಿದೆ.ಹಿಂದೆ ಗ್ರಾಮೀಣ ವಿದ್ಯಾರ್ಥಿಗಳಿಗೆ ಸೈಕಲ್ ನೀಡಿದ್ದರಿಂದ ವಿದ್ಯಾರ್ಥಿ ಗಳ ಹಾಜರಾತಿಯಲ್ಲಿ ಹೆಚ್ಚಿನ ಸುಧಾರಣೆ ಆಗಿತ್ತು.ಆದ್ದರಿಂದ ಶಿಕ್ಷಣ,ಆರೋಗ್ಯ,ಉದ್ಯೋಗ ಸೃಜನೆಗೆ ಒತ್ತು ನೀಡಿ.ಶಿಶು ಮರಣ  ಪ್ರಮಾಣ,ತಾಯಂದಿರ ಮರಣ ಪ್ರಮಾಣ ಹಾಗೂ ಅಪೌಷ್ಟಿಕತೆ ನಿವಾರಣೆಗೆ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು.

ಬಡವರು,ತಳವರ್ಗದ ಜನರ ಜೀವನ ಮಟ್ಟ ಸುಧಾರಣೆಗೆ ಶಿಕ್ಷಣ,ಉದ್ಯೋಗ,ಸಬಲೀಕರಣದ ಮಂತ್ರವನ್ನು ಅನುಷ್ಠಾನಗೊಳಿ ಸಬೇಕು.ಇದರಿಂದ ಅವರು ಸ್ವಾಭಿಮಾನದ ಬದುಕು ನಡೆಸಲು ಸಾಧ್ಯ.ಅಂತೆಯೇ ಗ್ರಾಮ ಒನ್ ಯೋಜನೆಯಡಿ 30 ನಾಗರಿಕ ಸೇವೆಗಳನ್ನು ಪಂಚಾಯತ್ ಮಟ್ಟದಲ್ಲಿ ಒದಗಿಸಲಾಗುವುದು. ಜನಸ್ಪಂದನದಡಿ ದಾಖಲಾದ ದೂರುಗಳ ನಿವಾರಣೆಗೆ,ಸಮಸ್ಯೆ ಪರಿಹಾರಕ್ಕೆ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.ದಿನಕ್ಕೆ 10 ತಾಸು ಕೆಲಸ ಮಾಡಿ,3 ದಿನ ಹಳ್ಳಿಗಳಲ್ಲಿ ಪ್ರವಾಸ ಕೈಗೊಳ್ಳಿ ಎಂದು ಸಲಹೆ ನೀಡಿದರು.ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಗಮನ ಕೇಂದ್ರೀಕರಿಸಿ.ಜನ ಪ್ರತಿನಿಧಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು,ಅವರ ನೆರವು ಪಡೆದುಕೊಂಡು ಕಾರ್ಯನಿರ್ವಹಿಸಿ, ಜನರ ಸಮಸ್ಯೆ ಬಗೆಹರಿಸಿ ಎಂದು  ಸೂಚನೆ ನೀಡಿದರು.

More News