ಬೆಂಗಳೂರು: ರಾಮನಗರ ಜಿಲ್ಲೆಯಲ್ಲಿ ಮುಖ್ಯಮಂತ್ರಿಗಳ ಎದುರಲ್ಲೇ ಕಾಂಗ್ರೆಸ್ಸಿನ ಸಂಸದ ಡಿ.ಕೆ.ಸುರೇಶ್ ಮತ್ತು ವಿಧಾನಪರಿಷತ್ ಸದಸ್ಯರು, ಸಚಿವರಾದ ಡಾ.ಅಶ್ವತ್ಥನಾರಾಯಣ ಅವರ ಮೇಲೆ ತಳ್ಳಾಟ ನಡೆಸಿ ಅಮಾನವೀಯವಾಗಿ ವರ್ತಿಸಿದ್ದನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ಅವರ ಮನೆ ಮುಂದೆ ಪ್ರತಿಭಟನೆ ನಡೆಸಿ ಮನೆಗೆ ಮುತ್ತಿಗೆ ಹಾಕಿದರು.
ಅಸಭ್ಯ ಹಾಗೂ ಗೂಂಡಾ ವರ್ತನೆ ತೋರಿದ ಸಂಸದರ ನಡೆಯನ್ನು ಖಂಡಿಸಿದ ಕಾರ್ಯಕರ್ತರು ಮನೆಗೆ ಮುತ್ತಿಗೆ ಹಾಕಿದರು, ಇವರನ್ನು ಪೊಲೀಸರು ಬಂಧಿಸಿದರು.

ನೂರಾರು ಸಂಖ್ಯೆಯಲ್ಲಿ ಸೇರಿದ್ದ ಕಾರ್ಯಕರ್ತರು ಸಂಸದರ ವಿರುದ್ಧ ಘೋಷಣೆಗಳನ್ನು ಕೂಗಿದರಲ್ಲದೆ, ಪೊಲೀಸರು ಹಾಕಿದ ಬ್ಯಾರಿಕೇಡ್ ಹತ್ತಿ ಮನೆಗೆ ನುಗ್ಗಲು ಯತ್ನಿಸಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಎಲ್ಲರನ್ನು ವಶಕ್ಕೆ ಪಡೆದಿದ್ದಾರೆ.




