ಸಚಿವ ಅಶೋಕ್ ಗೆ ಕೊರೊನಾ ಸೋಂಕು:ಖಾಸಗಿ ಆಸ್ಪತ್ರೆಯಲ್ಲಿ ಕ್ವಾರಂಟೈನ್

ಬೆಂಗಳೂರು : ಕಂದಾಯ ಸಚಿವ ಆರ್ ಅಶೋಕ್ ಅವರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ನಗರದ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತಮ್ಮ ಸಂಪರ್ಕಕ್ಕೆ ಬಂದಿರುವವರು ಪರೀಕ್ಷೆಗೆ ಒಳಪಡುವಂತೆ ಅವರು ಮನವಿ ಮಾಡಿದ್ದಾರೆ.
ಆರ್ ಅಶೋಕ್ ಟ್ವೀಟ್ ಮಾಡುವ ಮೂಲಕ ತಮಗೆ ಸೋಂಕು ತಗುಲಿರೋದನ್ನು ದೃಢಪಡಿಸಿದ್ದಾರೆ. ಸದ್ಯ ಅವರು ಮಣಿಪಾಲ್ ಆಸ್ಪತ್ರೆಯಲ್ಲಿ ಕ್ವಾರಂಟೈನ್ ಆಗಿದ್ದಾರೆ. ಚಿಕಿತ್ಸೆ ಪಡೆಯುತ್ತಿರುವ ಫೋಟೋವನ್ನು ಅವರು ಬಿಡುಗಡೆ ಮಾಡಿದ್ದಾರೆ.
ಕೆಲ ದಿನಗಳ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಅವರಿಗೂ ಸೋಂಕು ತಗುಲಿತ್ತು, ಅವರು ಕ್ವಾರಂಟೈನ್ ನಲ್ಲಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.

More News