ಬೆಂಗಳೂರು : ಕಾಂಗ್ರೆಸ್ ನೇತೃತ್ವದ ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಒತ್ತಾಯಿಸಿ ರಾಮನಗರ ಜಿಲ್ಲೆಯ ಸಂಗಮದಿಂದ ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನಕ್ಕೆ ಹಮ್ಮಿಕೊಂಡಿರುವ ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಯನ್ನು ನಿಷೇಧ ಗೊಳಿಸಿ ರಾಜ್ಯಸರ್ಕಾರ ಆದೇಶ ಹೊರಡಿಸಿದೆ.

ಮುಖ್ಯಕಾರ್ಯದರ್ಶಿ ರವಿ ಕುಮಾರ್ ನೇತೃತ್ವದಲ್ಲಿ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ ನಡೆಸಿ ತೀರ್ಮಾನ ಕೈಗೊಂಡು ಮುಖ್ಯ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.2005 ರ ವಿಪತ್ತು ನಿರ್ವಹಣಾ ಕಾಯ್ದೆಯ ನಿಯಮಗಳನ್ನು ಪಾದಯಾತ್ರೆ ಮೂಲಕ ಉಲ್ಲಂಘನೆ ಮಾಡಿದೆ.ಈ ಕೂಡಲೇ ಪಾದಯಾತ್ರೆ ಯನ್ನು ನಿಲ್ಲಿಸಿ,ಪಾದಯಾತ್ರೆಗೆ ಭಾಗವಹಿಸುವ ಜನರ ಹಾಗೂ ವಾಹನಗಳ ಅಂತರ್ ಜಿಲ್ಲೆ ಹಾಗೂ ರಾಮನಗರ ಜಿಲ್ಲೆಯ ಸಂಚಾರ ನಿಷೇಧಿಸಿದೆ.ಹಾಗೂ ಪಾದಯಾತ್ರೆ ತಡೆಯಲು ರಾಮನಗರ ಜಿಲ್ಲೆಯ ಪೊಲೀಸ್ ಅಧಿಕಾರಿಗಳಿಗೆ ಹಾಗೂ ಸಾರಿಗೆ ಆಯುಕ್ತರಿಗೆ ಮುಖ್ಯ ಕಾರ್ಯದರ್ಶಿ ನಿರ್ದೇಶನ ನೀಡಿದ್ದಾರೆ.

ವಿಪತ್ತು ನಿರ್ವಹಣಾ ಕಾಯ್ದೆ ಉಲ್ಲಂಘಿಸಿದರೆ ವಿಪತ್ತು ನಿರ್ವಹಣಾ ಕಾಯ್ದೆಯ ನಿಯಮಗಳಡಿ ಹಾಗೂ ಐಪಿಸಿ 188 ಅಡಿಯಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ಸಂದೇಶ ನೀಡಿದೆ.

ಕರ್ನಾಟಕ ಹೈಕೋರ್ಟ್ ಇಂದು ಮೇಕೆದಾಟು ಪಾದಯಾತ್ರೆಯಿಂದ ಕೊರೊನಾ ಸೋಂಕು ಹೆಚ್ಚಾಗುತ್ತಿದೆ. ಜನರ ಜೀವಕ್ಕೆ ,ಪ್ರಾಣಿಗೆ ಹಾನಿ ಉಂಟಾಗಲಿದೆ ಎಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ವಿಚಾರಣೆ ನಡೆಸಿತು.ಈ ವೇಳೆ ನ್ಯಾಯಮೂರ್ತಿ ಗಳು ಸರ್ಕಾರಕ್ಕೆ ಮತ್ತು ಕಾಂಗ್ರೆಸ್ ಪಕ್ಷಕ್ಕೆ ತೀವ್ರ ತರಾಟೆಗೆ ತೆಗೆದುಕೊಂಡಿತ್ತು.ಹಾಗೂ ಮುಖ್ಯ ನ್ಯಾಯಮೂರ್ತಿ ನೇತೃತ್ವದ ವಿಭಾಗೀಯ ಪೀಠ ಸರ್ಕಾರ ಪಾದಯಾತ್ರೆ ತಡೆಯಲು ಯಾವ ರೀತಿ ಕ್ರಮ ಕೈಗೊಂಡಿದೆ ಎಂದು ಪ್ರಶ್ನಿಸಿತ್ತು.ಈ ಹಿನ್ನಲೆಯಲ್ಲಿ ಇಂದು ರಾಜ್ಯ ಸರ್ಕಾರ ಆದೇಶ ಪತ್ರ ಹೊರಡಿಸಿದ್ದು ಮೇಕೆದಾಟು ಪಾದಯಾತ್ರೆ ಕೂಡಲೇ ನಿಷೇಧ ಗೊಳಿಸಿ ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್ ಆದೇಶ ಹೊರಡಿಸಿದ್ದಾರೆ.




