BUDGET 2022: ಫೆಬ್ರವರಿ 1 ರಂದು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ರಿಂದ ಬಜೆಟ್

ದೆಹಲಿ: ಕೊರೊನಾ ಮೂರನೇ ಅಲೆಯ ನಡುವೆಯೇ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1 ರಂದು ತಮ್ಮ ನಾಲ್ಕನೇ ಬಜೆಟ್ ಮಂಡನೆ ಮಾಡಲಿದ್ದಾರೆ.
ಇಂದಿನಿಂದ ಕೇಂದ್ರ ಬಜೆಟ್ ಅಧಿವೇಶನ ಆರಂಭವಾಗಿದ್ದು, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಉಭಯ ಸದನಗಳನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ನಾಳೆ ನಿರ್ಮಲಾ ಸೀತಾರಾಮನ್ ಅವರು ಮಂಡನೆ ಮಾಡಲಿರುವ ಬಜೆಟ್ ಮೇಲೆ ಜನಸಾಮಾನ್ಯರು ಸಾಕಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ.
ಕಳೆದ ವರ್ಷದಂತೆ ಈ ಬಾರಿಯೂ ಬಜೆಟ್ ಕಾಗದ ರಹಿತವಾಗಿರುತ್ತದೆ, ಫೆಬ್ರವರಿ 7ರಂದು ಪ್ರಧಾನಿ ಅವರು ಸದನದಲ್ಲಿ ಬಜೆಟ್ ಬಗ್ಗೆ ಪ್ರತಿಕ್ರಯಿಸುವ ಸಾಧ್ಯತೆಗಳಿವೆ, ಈ ಬಾರಿ ಯಾವ ರೀತಿಯಲ್ಲಿ ಸಮರ್ಥನೆ ಮಾಡಿಕೊಳ್ಳುತ್ತಾರೆ ಎನ್ನುವುದು ಅನೇಕರನ್ನು ಕುತೂಹಲಕ್ಕೆಡೆ ಮಾಡಿದೆ.

ಅದೇ ರೀತಿಯಲ್ಲಿ ಪ್ರತಿಪಕ್ಷಗಳು ಸರ್ಕಾರವನ್ನು ಇಕ್ಕಟ್ಟಿಗೆ ಸಿಕ್ಕಿಸಿ ಹಾಕಲು ಮುಂದಾಗಿದ್ದು, ರೈತರ ಸಮಸ್ಯೆಗಳು, ಪೆಗಾಸಸ್ ಸ್ಪೈವೇರ್ ಮೂಲಕ ಬೇಹುಗಾರಿಕೆ ಸೇರಿದಂತೆ ಅನೇಕ ವಿಚಾರಗಳನ್ನು ಅಸ್ತ್ರವನ್ನಾಗಿ ಇಟ್ಟುಕೊಂಡು ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ತಂತ್ರ ರೂಪಿಸಿವೆ.

ಪಂಚ ರಾಜ್ಯಗಳ ಚುನಾವಣೆ ಮಧ್ಯದಲ್ಲಿ ನಡೆಯುತ್ತಿರುವ ಈ ಬಜೆಟ್ ಅಧಿವೇಶನ ಯಾವ ರೀತಿಯಲ್ಲಿ ನಡೆಯುತ್ತಿದೆ ಎನ್ನುವುದು ಮತ್ತಷ್ಟು ಕುತೂಹಲಕ್ಕೆಡೆ ಮಾಡಿದೆ.

More News