DROUGHT RELIEF: ಸರಕಾರ ವರ್ಷಾಚರಣೆಯಲ್ಲಿ ಸಂಭ್ರಮಿಸುತ್ತಿದೆ!; ರೈತರ ಬರ ಪರಿಹಾರ ಹಣ ಬ್ಯಾಂಕ್ ಸಾಲಕ್ಕೆ ಜಮೆ ಆಗುತ್ತಿದೆ!!: ಹೆಚ್.ಡಿ. ಕುಮಾರಸ್ವಾಮಿ ಕಿಡಿ
ಬೆಂಗಳೂರು: ರಾಜ್ಯ ಸರ್ಕಾರ ವರ್ಷದ ಸಂಭ್ರಮದಲ್ಲಿದೆ. ಆದರೆ, ಕೇಂದ್ರ ಸರ್ಕಾರ ನೀಡಿರುವ ಬೆಳೆ ಪರಿಹಾರ ಹಣವು ಸಾಲಕ್ಕೆ ಜಮೆ ಆಗುತ್ತಿದೆ. ಇದು ಈ ಸರ್ಕಾರದ ವೈಖರಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದರು. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು; ರೈತರು ಬರದಿಂದ ಕಂಗೆಟ್ಟು ಸಂಕಷ್ಟದಲ್ಲಿದ್ದಾರೆ. ರೈತರಿಗೆ ಈ ಸರ್ಕಾರದ ಕೊಡುಗೆ ಏನೂ ಇಲ್ಲ. ರಾಜ್ಯದಲ್ಲಿ ರೈತರ ಆತ್ಮಹತ್ಯೆಗಳು ಆರಂಭ ಆಗಿವೆ. ಬರ ಪರಿಹಾರ ಹಣವನ್ನು ಸಾಲಕ್ಕೆ ವಜಾ ಮಾಡ್ತಿದ್ದಾರೆ. […]
HD KUMARASWAMY: ರಾಜ್ಯದಲ್ಲಿ ನನ್ನ ಫೋನ್ ಕದ್ದಾಲಿಸಲಾಗುತ್ತಿದೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಗಂಭೀರ ಆರೋಪ
ಬೆಂಗಳೂರು: ಹಾಸನದ ಪೆನ್ ಡ್ರೈವ್ ವಿಚಾರ ಬೆಳಕಿಗೆ ಬಂದ ಬಳಿಕ ಇದೇ ಮೊದಲ ಬಾರಿಗೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ಅತ್ಯಂತ ತೀವ್ರ ಸ್ವರೂಪದ ವಾಗ್ದಾಳಿ ನಡೆಸಿದ್ದಾರೆ. ಸರ್ಕಾರಕ್ಕೆ ಒಂದು ವರ್ಷ ತುಂಬಿರುವ ಹಿನ್ನೆಲೆಯಲ್ಲಿ ಜೆ ಪಿ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕುಮಾರಸ್ವಾಮಿ ಸರ್ಕಾರದ ಸಾಧನೆಯನ್ನು ಪ್ರಶ್ನೆ ಮಾಡುತ್ತಾ ಹಾಸನದ ಪೆನ್ ಡ್ರೈವ್ ವಿಚಾರದಲ್ಲಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರಾಜ್ಯದಲ್ಲಿ ನನ್ನ ಮತ್ತು ದೇವೇಗೌಡರ ಇತರ ಕುಟುಂಬ ಸದಸ್ಯರ […]
PENDRIVE CASE: ನಾವು ಹೇಳಿದಂತೆ ಹೇಳಿಕೆ ಕೊಡದಿದ್ದರೆ ನಿಮ್ಮನ್ನು ವೇಶ್ಯಾವಾಟಿಕೆ ಪ್ರಕರಣದಲ್ಲಿ ಸಿಲುಕಿಸುತ್ತೇವೆ ಎಂದು ಬೆದರಿಕೆ: HDK ಗಂಭೀರ ಆರೋಪ
ಬೆಂಗಳೂರು: ಕಾಂಗ್ರೆಸ್ ಸರಕಾರಕ್ಕೆ ಅನುಕೂಲ ಆಗುವ ರೀತಿಯಲ್ಲಿ ಹೇಳಿಕೆ ನೀಡದಿದ್ದರೆ ನಿಮ್ಮನ್ನು ವೇಶ್ಯಾವಾಟಿಕೆ ಪ್ರಕರಣದಲ್ಲಿ ಸಿಲುಕಿಸುತ್ತೇವೆ ಎಂದು ಎಸ್ಐಟಿ ಅಧಿಕಾರಿಗಳು ನೊಂದ ಮಹಿಳೆಯರಿಗೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದ್ದಾರೆ. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು; ಸಂತ್ರಸ್ತ ಮಹಿಳೆ ಒಬ್ಬರು ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ದೂರು ಕೊಟ್ಟ ವಿಚಾರದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದರು. ಈ ತನಿಖೆ ಯಾವ ದಿಕ್ಕಿನಲ್ಲಿ ನಡೆಯುತ್ತಿದೆ ಎನ್ನುವುದು […]
PRAJWAL REVANNA PENDRIVE CASE: ಪ್ರಜ್ವಲ್ ರೇವಣ್ಣ ಕೇಸ್‌ನಲ್ಲಿ ಮತ್ತೆ ಮುನ್ನೆಲೆಗೆ ಬಂದ ಜಾತಿ ಪಾಲಿಟಿಕ್ಸ್
ಬೆಂಗಳೂರು: ಹಾಸನದ ಅಶ್ಲೀಲ ವಿಡಿಯೋ ಪ್ರಕರಣ ಕಾಂಗ್ರೆಸ್ ಮತ್ತು ಜೆಿಡಿಎಸ್ ಮಧ್ಯೆ ರಾಜಕೀಯ ಕದನಕ್ಕೆ ವೇದಿಕೆ ಕಲ್ಪಿಸಿದೆ. ಕಾಂಗ್ರೆಸ್ ಒಕ್ಕಲಿಗ ನಾಯಕ ವಿರುದ್ಧ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ತೀವ್ರ ವಾಗ್ದಾಳಿ ನಡೆಸಿದ ಬೆನ್ನಲ್ಲೇ. ಸಚಿವ ಕೃಷ್ಣಭೈರೇಗೌಡ ಪ್ರತಿದಾಳಿ ನಡೆಸಿದ್ದಾರೆ. ಜಾತಿ ಹೆಸರು ಹೇಳಿಕೊಂಡು ಪ್ರಕರಣದಿಂದ ನುಣಚಿಕೊಳ್ಳಲು ಯತ್ನ ನಡೆಸುವುದು ಅತ್ಯಂತ ಹೀನಾಯ ಕೃತ್ಯ ಎಂದು ಕೃಷ್ಣಭೈರೇಗೌಡ ಪ್ರತಿಕ್ರಿಯೆ ನೀಡಿದ್ದಾರೆ. ವಿಶ್ವದಲ್ಲಿ ಅತೀ ದೊಡ್ಡದಾದ ಲೈಂಗಿಕ ಹಗರಣ ಬೆಳಕಿಗೆ ಬಂದಿದೆ. ಇದರಲ್ಲಿ ಸಂತ್ರಸ್ಥೆಯರಿಗೆ ನ್ಯಾಯ ಸಿಗಬೇಕು […]
HD KUMARASWAMY CHALLENGE: ಸಚಿವ ಕೃಷ್ಣಬೈರೇಗೌಡರಿಗೆ ಮಾಜಿ ಸಿಎಂ ಕುಮಾರಸ್ವಾಮಿ ನೇರ ಸವಾಲು
ಬೆಂಗಳೂರು: ಹಾಸನ ಅಶ್ಲೀಲ ವಿಡಿಯೋ ಪ್ರಕರಣವನ್ನು ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಗಂಭೀರವಾಗಿ ತೆಗೆದುಕೊಂಡಿದ್ದಾರೆ. ಜೆಡಿಎಸ್ ಕೋರ್ ಕಮಿಟಿ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕುಮಾರಸ್ವಾಮಿ, ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಅಶ್ಲೀಲ ವಿಡಿಯೋ ಪ್ರಕರಣದ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿ ನಡೆಸಿದ ಒಕ್ಕಲಿಗ ಸಚಿವರು ಮತ್ತು ಶಾಸಕರ ನಡೆಯನ್ನು ಕುಮಾರಸ್ವಾಮಿ ತೀವ್ರವಾಗಿ ಖಂಡಿಸಿದರು. ಸಚಿವ ಕೃಷ್ಣ ಬೈರೇಗೌಡ ಅವರಿಗೆ ಕುಮಾರಸ್ವಾಮಿ ನೇರ ಸವಾಲು ಹಾಕಿದರು. ಜಾತಿ ಹೆಸರಿನಲ್ಲಿ ರಕ್ಷಣೆ ಪಡೆಯುವ ಅಗತ್ಯ ನನಗೆ ಇಲ್ಲ ಎಂದು […]
HD Kumaraswamy: ಮಾಜಿ ಪ್ರಧಾನಮಂತ್ರಿ ಮಗನಾ ಇವನು? ರಾಹುಲ್ ಗಾಂಧಿಗೆ ತಕ್ಷಣವೇ SIT ನೊಟೀಸ್ ಕೊಡಲು ಹೆಚ್.ಡಿ. ಕುಮಾರಸ್ವಾಮಿ ಆಗ್ರಹ
ರಾಯಚೂರು: ಸಂಸದ ಪ್ರಜ್ವಲ್ ರೇವಣ್ಣ 400 ಮಹಿಳೆಯರ ಮೇಲೆ ಅತ್ಯಾಚಾರ ಮಾಡಿದ್ದಾರೆ ಎಂದು ಬಹಿರಂಗ ಹೇಳಿಕೆ ನೀಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ತಕ್ಷಣವೇ ವಿಶೇಷ ತನಿಖಾ ದಳ (SIT) ನೊಟೀಸ್ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಅವರು ಆಗ್ರಹಪಡಿಸಿದರು. ಇಷ್ಟು ಕರಾರುವಕ್ಕಾಗಿ, ಅಂಕಿ ಅಂಶಗಳ ಸಮೇತ ರಾಹುಲ್ ಗಾಂಧಿ ಮಾಹಿತಿ ನೀಡಿದ್ದಾರೆ. ಈ ಸರಕಾರಕ್ಕೆ ಗಂಡಸ್ತನ, ತಾಕತ್ತು ಎನ್ನುವುದು ಇದ್ದರೆ ಈ ಕೂಡಲೇ ಆತನಿಗೆ ತನಿಖಾ ದಳದಿಂದ ಕೂಡಲೇ ನೋಟಿಸ್ […]