Nikhil Kumaraswamy: ಸೋತಿದೀನಿ ಅಂತ ಮೂಲೇಲಿ ಕೂರುವ ಜಾಯಮಾನ ನನ್ನದಲ್ಲ: ನಿಖಿಲ್ ಕುಮಾರಸ್ವಾಮಿ

ಹಾಸನ: ನಾನು ಸೋತು ಒಂದು ವಾರ ಆಗಿದೆ. ನನಗಿನ್ನು ವಯಸ್ಸು 36 ವರ್ಷ. ನನ್ನ ಮುಂದೆ ಇರುವುದು ಒಂದೇ ಸವಾಲು. ಜನತಾದಳ ಪಕ್ಷವನ್ನು ದಡ ಮುಟ್ಟಿಸಬೇಕು ಎಂದು ನಿಖಿಲ್ ಕುಮಾರಸ್ವಾಮಿ ಅವರು ತಿಳಿಸಿದರು. ಹಾಸನ ಜಿಲ್ಲೆಯ ಅರಕಲಗೂಡಿನಲ್ಲಿ ಶನಿವಾರ ರಾತ್ರಿ ಮಾಜಿ ಸಚಿವ ಎ.ಮಂಜು ಅವರ ಹುಟ್ಟುಹಬ್ಬ ಹಾಗೂ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಕೊನೆ ಉಸಿರು ಇರುವವರೆಗೂ ಹೋರಾಡುತ್ತೇನೆ ನಾನು ಶಾಸಕನಾಗಬೇಕು ಎನ್ನುವುದು ನನ್ನ ಮುಂದೆ ಇರುವ ಪ್ರಶ್ನೆ ಅಲ್ಲ, ಪ್ರಾದೇಶಿಕ ಪಕ್ಷ ಉಳಿಯಬೇಕಿದೆ, […]

Pollution Free Automobile Sector: 2070ರ ವೇಳೆಗೆ ಅಟೋಮೊಬೈಲ್ ಕ್ಷೇತ್ರ ಮಾಲಿನ್ಯ ಮುಕ್ತ; ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

ನವದೆಹಲಿ: ಪ್ರಧಾನಿ ಮೋದಿ ಅವರ ಮೇಕ್ ಇನ್ ಇಂಡಿಯಾ ಹಾಗೂ ಆತ್ಮನಿರ್ಭರ್ ಭಾರತ್ ಪರಿಕಲ್ಪನೆ ಅಡಿಯಲ್ಲಿ 2070ರ ವೇಳೆಗೆ ಅಟೋಮೊಬೈಲ್ ಕ್ಷೇತ್ರವನ್ನು ಸಂಪೂರ್ಣ ವಾಯು ಮಾಲಿನ್ಯ ಮುಕ್ತಗೊಳಿಸಲಾಗುವುದು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ನವದೆಹಲಿಯ ಭಾರತ್ ಮಂಟಪದಲ್ಲಿ ಭಾರತ್ ಹೆವಿ ಎಲೆಕ್ಟ್ರಿಕಲ್ (BHEL) ಕಂಪನಿ ಹಮ್ಮಿಕೊಂಡಿದ್ದ BHEL ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಕಳೆದ ಹತ್ತು ವರ್ಷದಲ್ಲಿ ಕೇಂದ್ರ ಸರ್ಕಾರವು ವಾಹನ ವಲಯದಲ್ಲಿ ಮಾಲಿನ್ಯದ ಪ್ರಮಾಣವನ್ನು […]

HD KUMARASWAMY: 6ನೇ ಜಾಗತಿಕ ಆರ್ಥಿಕ ಶಕ್ತಿಯಾಗಿ ಅವತರಿಸಲಿರುವ ಭಾರತಕ್ಕೆ ಉಕ್ಕು ಕ್ಷೇತ್ರ ಶಕ್ತಿ ತುಂಬುತ್ತಿದೆ ಎಂದ ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಭಾರತ ಜಗತ್ತಿನ 5ನೇ ಬೃಹತ್ ಆರ್ಥಿಕ ಶಕ್ತಿಯಾಗಲು ನಾಗಾಲೋಟದಲ್ಲಿ ಮುನ್ನುಗುತ್ತಿದ್ದು, ಅದಕ್ಕೆ ಹೃದಯದಂತೆ ಉಕ್ಕು ಉದ್ಯಮ ತನ್ನ ಪಾತ್ರ ನಿರ್ವಹಿಸುತ್ತಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಪ್ರತಿಪಾದಿಸಿದರು. ಬೆಂಗಳೂರಿನಲ್ಲಿ ಗುರುವಾರ ಭಾರತೀಯ ಲೋಹ ಸಂಸ್ಥೆ (IIM – Indian institute of metal) ಹಮ್ಮಿಕೊಂಡಿದ್ದ ಲೋಹಶಾಸ್ತ್ರಜ್ಞ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕೇಂದ್ರ ಸಚಿವರು ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಭಾರತವು ಈಗ ಜಗತ್ತಿನ 6ನೇ […]

Kannada Sahitya Sammelana 2024: ಮಂಡ್ಯ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕರಾಗಿ ಆಯ್ಕೆಯಾದ ಗೊ.ರು. ಚನ್ನಬಸಪ್ಪ ಅವರಿಗೆ ಹೆಚ್.ಡಿ.ಕುಮಾರಸ್ವಾಮಿ ಅಭಿನಂದನೆ

ಬೆಂಗಳೂರು: ಸಕ್ಕರೆನಾಡು ಮಂಡ್ಯದಲ್ಲಿ ನಡೆಯಲಿರುವ ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ಹಿರಿಯ ಸಾಹಿತಿ ಗೊ.ರು.ಚನ್ನಬಸಪ್ಪ ಅವರಿಗೆ ಮಂಡ್ಯ ಲೋಕಸಭೆ ಸದಸ್ಯರು ಹಾಗೂ ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಅಭಿನಂದನೆ ಸಲ್ಲಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಕೇಂದ್ರ ಸಚಿವರು; ಕನ್ನಡ ಪರಿಚಾರಿಕೆ, ಸಂಘಟನೆ, ಜಾನಪದ, ಶಿಕ್ಷಣ, ಮಾಧ್ಯಮ ಸೇರಿ ಹಲವು ಕ್ಷೇತ್ರಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡವರು ಗೊರುಚ ಅವರು, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿಯೂ ಅವರು ಅನನ್ಯ ಸೇವೆ ಸಲ್ಲಿಸಿದ್ದಾರೆ. […]

HD KUMARASWAMY ON ZAMEER AHMED: ಸಣ್ಣಪುಟ್ಟ ವಿಷಯಕ್ಕೂ ಕೇಸ್ ಹಾಕುವ ಸರ್ಕಾರ; ಜಮೀರ್ ವಿಷಯದಲ್ಲಿ ಯಾಕೆ ಸುಮ್ಮನಿದೆ? ಹೆಚ್.ಡಿ. ಕುಮಾರಸ್ವಾಮಿ

ಮೈಸೂರು: ತಮ್ಮ ಬಗ್ಗೆ ಸಚಿವ ಜಮೀರ್ ಅಹಮದ್ ವರ್ಣಭೇದ ಹಾಗೂ ಜನಾಂಗೀಯ ನಿಂದನೆ ಮಾಡಿರುವ ಬಗ್ಗೆ ಅತೀವ ಬೇಸರ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು; ಸಣ್ಣ ಸಣ್ಣ ವಿಷಯಕ್ಕೂ ಕೇಸು ಹಾಕಿ ಜೈಲಿಗೆ ಹಾಕುವ ಸಿದ್ದರಾಮಯ್ಯ ಸರ್ಕಾರ ಅವರು ಹೀಗೇಕೆ ಸುಮ್ಮನಿದೆ ಎಂದು ಪ್ರಶ್ನಿಸಿದ್ದಾರೆ. ತಾಯಿ ಚಾಮುಂಡೇಶ್ವರಿ ದರ್ಶನ ಪಡೆದ ನಂತರ ಹಾಗೂ ಬಿರ್ಸಾ ಮುಂಡಾ ಜಯಂತಿ, ಜನಜಾತಿಯ ದಿವಸ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಅವರು ಎರಡೂ ಕಡೆ ಮೈಸೂರಿನಲ್ಲಿ ಮಾಧ್ಯಮಗಳ ಜತೆ ಮಾತನಾಡಿದರು. ಪ್ರತಿ […]

HD KUMARASWAMY ON YOGESHWAR: ಮೂರು ತಿಂಗಳ ಹಿಂದೆಯೇ ವ್ಯಾಪಾರ ಆಗಿ ಹೋಗಿದೆ! ಯೋಗೇಶ್ವರ್ ಮೇಲೆ HDK ಕಿಡಿ

ಚನ್ನಪಟ್ಟಣ/ರಾಮನಗರ: ಸಿಪಿ ಯೋಗೇಶ್ವರ್ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರುವ ವ್ಯಾಪಾರ ಲೋಕಸಭೆ ಚುನಾವಣೆ ಸಂದರ್ಭದಲ್ಲಿಯೇ ಆಗಿ ಹೋಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ಕ್ಷೇತ್ರದ ಬೇವೂರು ಮಂಡ್ಯ ಗ್ರಾಮದಲ್ಲಿ ಪ್ರಚಾರ ಮಾಡಿದ ಅವರು; ಅವರು ನೆಪ ಮಾತ್ರಕ್ಕೆ ಲೋಕಸಭೆ ಚುನಾವಣೆಯಲ್ಲಿ ನಮ್ಮ ಜತೆ ಇದ್ದರು. ಮಾನಸಿಕವಾಗಿ ಕಾಂಗ್ರೆಸ್ ನಲ್ಲಿಯೇ ಇದ್ದರು. ನಮಗೆ ಹಾಗೂ ಬಿಜೆಪಿ ನಾಯಕರಿಗೆ ಟೋಪಿ ಹಾಕಿ ಹೋದರು ಎಂದು ಹರಿಹಾಯ್ದರು. ಮೊದಲು ಜೆಡಿಎಸ್ ಬಿಜೆಪಿ ಯಾವುದೇ ಆಗಲಿ, ಯಾವುದೇ ಚಿಹ್ನೆ ಆಗಲಿ […]

HD DEVEGOWDA CAMPAIGN: ರಾಜ್ಯ ಕಾಂಗ್ರೆಸ್ ಸರ್ಕಾರ ಪೂರ್ಣಾವಧಿ ಇರಲ್ಲ: ಹೆಚ್.ಡಿ. ದೇವೇಗೌಡ

ಚನ್ನಪಟ್ಟಣ/ರಾಮನಗರ: ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಪೂರ್ಣಾವಧಿ ಪೂರ್ಣಗೊಳಿಸುವುದಿಲ್ಲ ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡ ಅವರು ಭವಿಷ್ಯ ನುಡಿದಿದ್ದಾರೆ. ಕ್ಷೇತ್ರದ ಎಸ್.ಎಂ.ಹಳ್ಳಿಯಲ್ಲಿ ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರ ಪರ ಪ್ರಚಾರ ನಡೆಸಿದ ಮಾಜಿ ಪ್ರಧಾನಿಗಳು; ನಿಖಿಲ್ ಕುಮಾರಸ್ವಾಮಿ ಅವರನ್ನು ಬೆಂಬಲಿಸುವ ಮೂಲಕ ಪ್ರಧಾನಿ ಮೋದಿ ಮತ್ತು ಎಚ್.ಡಿ.ಕುಮಾರಸ್ವಾಮಿ ಅವರನ್ನು ಬಲಪಡಿಸಿ’ ಎಂದು ಮತದಾರರಲ್ಲಿ ಎಚ್.ಡಿ.ದೇವೇಗೌಡ ಮನವಿ ಮಾಡಿದ್ದಾರೆ. ಕಾಂಗ್ರೆಸ್ ನ ನಡತೆ ಮತ್ತು ಸಂಸ್ಕೃತಿಯನ್ನು ಕಟುವಾಗಿ ಟೀಕಿಸಿದ ಅವರು; ಜನರನ್ನು ಈ ಸರ್ಕಾರ ಸುಲಿಗೆ ಮಾಡುತ್ತಿದೆ. […]

HDK ON COVID SCAM: ಯಡಿಯೂರಪ್ಪ, ಶ್ರೀರಾಮುಲು ವಿರುದ್ಧ ಪ್ರಾಸಿಕ್ಯೂಷನ್ ಗೆ ಶಿಫಾರಸು ರಾಜಕೀಯ ದುರುದ್ದೇಶದಿಂದ ಕೂಡಿದೆ: HD ಕುಮಾರಸ್ವಾಮಿ ಕಿಡಿ

ಚನ್ನಪಟ್ಟಣ/ರಾಮನಗರ: ಕೋವಿಡ್ ವಿಚಾರದಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಹಾಗೂ ಮಾಜಿ ಸಚಿವ ಶ್ರೀರಾಮುಲು ವಿರುದ್ಧ ಪ್ರಾಸಿಕ್ಯೂಷನ್ ಗೆ ಶಿಫಾರಸು ಮಾಡಿರುವುದು ರಾಜಕೀಯ ‌ದುರುದ್ದೇಶ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ. ಚನ್ನಪಟ್ಟಣ ಕ್ಷೇತ್ರದಲ್ಲಿ ಪ್ರಚಾರದ ನಡುವೆ ಮಾಧ್ಯಮಗಳ ಜತೆ ಮಾತನಾಡಿದ ಅವರು; ತಮ್ಮ ಅಧೀನ ಸಂಸ್ಥೆಗಳನ್ನು, ಅಧಿಕಾರಿಗಳನ್ನು ದುರುಪಯೋಗ ಮಾಡಿಕೊಂಡು ಪ್ರತಿಪಕ್ಷ ನಾಯಕರನ್ನು ಹತ್ತಿಕ್ಕುವ ಪ್ರಯತ್ನ ಮಾಡುತ್ತಿದೆ ಎಂದು ಅವರು ಆರೋಪಿಸಿದರು. ರಾಜ್ಯದಲ್ಲಿ ಮೂರು ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯುತ್ತಿದೆ. ಇಂತಹ ಸಂದರ್ಭದಲ್ಲಿ ರಾಜ್ಯ ಸರ್ಕಾರ […]

HD KUMARASWAMY CAMPAIGN: ಶಾಲೆಗೆ 25 ಎಕರೆ ದಾನ ಮಾಡಲು ಅವರೇನು ಮಹಾರಾಜರ ವಂಶಸ್ಥರಾ?; ಡಿಕೆಶಿಗೆ ತಿರುಗೇಟು ಕೊಟ್ಟ HDK

ರಾಮನಗರ: ಶಾಲೆಗೆ 25 ಎಕರೆ ದಾನ ನೀಡೀದ್ದೇನೆ ಎಂಬ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು; ಅಷ್ಟು. ಜಮೀನು ಕೊಡಲಿಕ್ಕೆ ಅವರೇನು ಮಹಾರಾಜರ ವಂಶಸ್ಥರಾ? ಎಂದು ಕೇಳಿದರು. ಚನ್ನಪಟ್ಟಣ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರದ ನಡುವೆ ಮುಕುಂದ ಗ್ರಾಮದಲ್ಲಿ ಅವರು ಮಾಧ್ಯಮಗಳ ಜತೆ ಮಾತನಾಡಿದರು. ಅವರು ಎಲ್ಲಿ ಜಮೀನು ಕೊಟ್ಟಿದ್ದಾರೆ? 25 ಎಕರೆ ಕೊಟ್ಟಿದ್ದಾರೆಯೇ? ಕೊಟ್ಟಿದ್ದರೆ ದಾಖಲೆ ಸಮೇತ ಜನರಿಗೆ ತಿಳಿಸಲಿ, ನಾನೂ ಸಂತೋಷ ಪಡುತ್ತೇನೆ. ಸುಳ್ಳು ಹೇಳಲು ಇತಿ ಮಿತಿ […]

HD KUMARASWAMY: ಮೈಸೂರಿನಲ್ಲಿ ಸಚಿವರಿಗೆ ಕಪಾಳಮೋಕ್ಷ ಪ್ರಕರಣ: ವರ್ಗಾವಣೆ ದಂಧೆ ವಿಚಾರಕ್ಕೆ ಕಿತ್ತಾಡಿಕೊಂಡಿದ್ದಾರೆ ಎಂದ HDK

ಚನ್ನಪಟ್ಟಣ/ರಾಮನಗರ: ಮೈಸೂರಿನಲ್ಲಿ ಸಚಿವರು ಇನ್ನಿತರರು ಹೊಡೆದಾಡಿಕೊಂಡಿರುವುದು ವರ್ಗಾವಣೆ ದಂಧೆ ವಿಚಾರಕ್ಕೆ ಎನ್ನುವ ಮಾಹಿತಿ ಇದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ. ಚನ್ನಪಟ್ಟಣದ ಪ್ರಚಾರದ ನಡುವೆ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಅವರು; ವರ್ಗಾವಣೆ ದಂಧೆ ವಿಚಾರಕ್ಕೆ ಕಿತ್ತಾಡಿಕೊಂಡಿದ್ದಾರೆ ಎನ್ನುವ ಮಾಹಿತಿ ಇದೆ. ವರ್ಗಾವಣೆ ವ್ಯವಹಾರಕ್ಕೆ ಅವರು ಕಿತ್ತಾಡಿಕೊಂಡಿದ್ದಾರೆ. ಇನ್ನೂ ಸ್ಪಷ್ಟವಾಗಿ ಹೇಳುವುದಾದರೆ ಹಂಚಿಕೆ ವಿಚಾರಕ್ಕೆ ಹೊಡೆದಾಡಿಕೊಂಡಿದ್ದಾರೆ. ಒಬ್ಬ ಮಂತ್ರಿಯನ್ನು ಬಹಿರಂಗವಾಗಿ ಹೊಡೆಯುತ್ತಾರೆ ಎಂದರೆ ಈ ರಾಜ್ಯ ಎಲ್ಲಿಗೆ ಬಂದಿದೆ? ಎಂಬುದನ್ನು ಗಮನಿಸಬೇಕು ಎಂದು ಕುಮಾರಸ್ವಾಮಿ […]

You cannot copy content of this page